ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಾಗದೇ ಏಕಾಂಗಿಯಾಗಿ ಸ್ಪರ್ಧಿಸಲು ಬಿಎಸ್ ಪಿ ನಿರ್ಧಾರ ಮಾಡಿದೆ.
ಈ ಕುರಿತು ಬಿಎಸ್ ಪಿ ನಾಯಕಿ ಮಾಯಾವತಿ ಸುದ್ದಿಗೋಷ್ಠೀ ನಡೆಸಿ ಘೋಷಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿಯೇ ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ.
ಇಂಡಿಯಾ ಒಕ್ಕೂಟ ಸೇರಲ್ಲ ಎಂದು ಖಡಕ್ ಸಂದೇಶ ರವಾನಿಸಿರುವ ಮಾಯಾವತಿ, ಬಿಎಸ್ ಪಿ ಏಕಾಂಗಿಯಾಗಿ ಸ್ಪರ್ಧಿಸಿದ್ರೆ ಒಳ್ಳೆಯ ರಿಸಲ್ಟ್ ತರುತ್ತದೆ. ಮೈತ್ರಿ ಮಾಡಿಕೊಂಡರೇ ಪಕ್ಷಕ್ಕೆ ಕಷ್ಟ. ಬಹುತೇಕ ಪಕ್ಷಗಳು ಬಿಎಸ್ ಪಿ ಜೊತೆ ಬರಲು ಬಯಸುತ್ತದೆ ಎಂದರು.


