ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಅಂತಿಮ ವಿಚಾರಣೆ ನವೆಂಬರ್ 30ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಇದೀಗ ವಿವಾದದ ಉರಿಯುವ ಬೆಂಕಿಗೆ ಎಂಇಎ ತುಪ್ಪ ಸುರಿಯುವ ಕೃತ್ಯಕ್ಕೆ ಮುಂದಾಗಿದೆ.
ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವರಾದ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿಗೆ ಪತ್ರ ಬರೆದು, ಬೆಳಗಾವಿಗೆ ಬರುವಂತೆ ಆಹ್ವಾನಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಉಭಯ ರಾಜ್ಯಗಳ ಗಡಿವಿವಾದ ವಿಚಾರಣೆಯ ನಡುವೆ ಇಬ್ಬರನ್ನು ಮಹಾರಾಷ್ಟ್ರ ಸರ್ಕಾರ ಸಮನ್ವಯ ಸಚಿವರನ್ನಾಗಿ ನೇಮಿಸಿದೆ. ಗಡಿವಿವಾದ ಅಲ್ಲದೇ ಇತರ ಸಮಸ್ಯೆಗಳ ಬಗ್ಗೆ ಎಂಇಎಸ್ ಕಾರ್ಯಕರ್ತರ ಜೊತೆ ಚರ್ಚಿಸುವುದು ಅಗತ್ಯವಿದೆ.
ಹೀಗಾಗಿ ಬೆಳಗಾವಿಗೆ ಇಬ್ಬರು ಸಚಿವರು ಆಗಮಿಸಿ ಚರ್ಚಿಸಬೇಕಿದೆ ಎಂದು ಪತ್ರದಲ್ಲಿ ಎಂಇಎಸ್ ಮುಖಂಡರು ಮನವಿ ಮಾಡಿದ್ದಾರೆ. ಎಂಇಎಸ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಹಾ ಗಡಿ ಸಚಿವರು ಡಿಸೆಂಬರ್ 3ಕ್ಕೆ ಬೆಳಗಾವಿಗೆ ಬರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy