ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರು ಆಸ್ಪತ್ರೆಗೆ ಆಗಮಿಸುವ ಮೊದಲೇ ಅವರಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ.
ಅವರು ಬಹಳ ಸೀರಿಯಸ್ ಆಗಿದ್ದಾರೆ ಎಂದೇ ಡಾಕ್ಟರ್ ಹೇಳಿದ್ದಾರೆ. ಹೀಗಾಗಿ ಪುನೀತ್ ಅವರ ಅಭಿಮಾನಿಗಳಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಸದ್ಯ ಪುನೀತ್ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದಾರೆ. ಪುನೀತ್ ಅವರಿಗೆ ಮಸಾಜ್ ಮಾಡಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಅವರು ಜೀವನ್ಮರಣ ಹೋರಾಟದಲ್ಲಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಈಗಾಗಲೇ ಆಸ್ಪತ್ರೆಯ ಮುಂದೆ ಜಮಾಯಿಸಿರುವ ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು ಗೋಳಾಡುತ್ತಿರುವ ದೃಶ್ಯ ಕಂಡು ಬಂದಿದೆ.