ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇನ್ನು ಕೂಡ ಜೀವಂತವಾಗಿರಲಿವೆ.
ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇಬ್ಬರಿಗೆ ದೃಷ್ಟಿಯನ್ನು ನೀಡಲಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ನಟ ಸೋನುಸೂದ್, ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ವೆಂಕಟೇಶ್ವರ ಪ್ರಸಾದ್, ಅನಿಲ್ ಕುಂಬ್ಳೆ, ಹರ್ಬಜನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.