ತುಮಕೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ), ಕುಣಿಗಲ್ ನಲ್ಲಿ 2026–27ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಆ.31 ರವರಗೆ ಪ್ರವೇಶ ಪಡೆಯಲು ಅವಕಾಶವಿದೆ ಎಂದು ಸಂಸ್ಥೆಯ ಪ್ರಾಚಾರ್ಯ ನರಸಿಂಹಮೂರ್ತಿ ಡಿ., ತಿಳಿಸಿದ್ದಾರೆ.
ಸಂಸ್ಥೆಯಲ್ಲಿ ಪ್ರಸ್ತುತ ಮೆಕ್ಯಾನಿಕ್ ಡೀಸೆಲ್, ಡ್ರೆಸ್ ಮೇಕಿಂಗ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ಡ್ ಸಿ.ಎನ್.ಸಿ. ಮಷಿನಿಂಗ್ ಟೆಕ್ನಿಷಿಯನ್, ಬಿ.ಡಿ.ವಿ.ವಿ., ಇಂಡಸ್ಟ್ರಿಯಲ್ ರೋಬೋಟಿಕ್ಸ್, ಎಮ್.ಪಿ.ಸಿ.ಎ. ಹಾಗೂ ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ ವೃತ್ತಿಗಳಲ್ಲಿ ಖಾಲಿ ಸೀಟುಗಳು ಲಭ್ಯವಿವೆ. ವಿದ್ಯಾರ್ಥಿಗಳು ಉದ್ಯೋಗಮುಖಿ ಕೌಶಲ್ಯಗಳನ್ನು ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಈ ಕೋರ್ಸ್‌ಗಳು ಸಹಕಾರಿಯಾಗಲಿವೆ.
ವಿಶೇಷವಾಗಿ ಎಸ್ ಎಸ್ ಎಲ್ ಸಿ ಅನುತ್ತೀರ್ಣರಾದ ಅಭ್ಯರ್ಥಿಗಳೂ ಡ್ರೆಸ್ ಮೇಕಿಂಗ್ ವೃತ್ತಿಗೆ ಪ್ರವೇಶ ಪಡೆಯಬಹುದು. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸರ್ಕಾರಿ ಐಟಿಐ, ಕುಣಿಗಲ್ ಗೆ ಭೇಟಿ ನೀಡಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 97318 09886ನ್ನು ಸಂಪರ್ಕಿಸಲು ಕೋರಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


