ಕೋಲಾರ: ಸ್ನೇಹಿತರ ವಾಟ್ಸಾಪ್ ಗೆ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟನದಲ್ಲಿ ನಡೆದಿದ್ದು, ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
17 ವರ್ಷ ವಯಸ್ಸಿನ ಕಿಶೋರ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದಾನೆ. ಈ ವಿದ್ಯಾರ್ಥಿಯು ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಎನ್ನಲಾಗಿದೆ. ಅ.26ರಂದು ಸಂಜೆ ವೇಳೆ ಸ್ನೇಹಿತರ ವಾಟ್ಸಾಪ್ ಗ್ರೂಪ್ ಗೆ ಮೆಸೇಜ್ ಹಾಕಿದ ಕಿಶೋರ್, “ ಮಿಸ್ ಯೂ ಫ್ರೆಂಡ್ಸ್, ನಾನು ಹೋಗ್ತಿದ್ದೀನಿ… ನನ್ನದು ಬ್ಯಾನರ್ ಹಾಕಿ” ಎಂದು ಸಂದೇಶ ಕಳುಹಿಸಿದ್ದಾನೆ.
ಆತ್ಮಹತ್ಯೆಗೂ ಮೊದಲು ಕೆರೆಯ ಫೋಟೋವನ್ನು ಗ್ರೂಪ್ ಗೆ ಶೇರ್ ಮಾಡಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ವಿದ್ಯಾರ್ಥಿಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಇನ್ನೂ ಕಾಲೇಜು ಪ್ರಾಂಶುಪಾಲ ಸುಗ್ರಮಣಿ ಅವರು ಬೈದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.