nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾಜಮುಖಿ ಕುಟುಂಬ ಕವಟಗಿಮಠ ಕೊಡುಗೆ ಅನನ್ಯ
    ರಾಜ್ಯ ಸುದ್ದಿ January 16, 2024

    ಸಮಾಜಮುಖಿ ಕುಟುಂಬ ಕವಟಗಿಮಠ ಕೊಡುಗೆ ಅನನ್ಯ

    By adminJanuary 16, 2024No Comments2 Mins Read
    kavatagi matta

    ಕವಟಗಿಮಠ ಮನೆತನ ಶಿಕ್ಷಣ, ಕೃಷಿ, ಸಹಕಾರಿ, ವ್ಯಾಪಾರ, ಸರಾಫಿ ವೃತ್ತಿ ಹಾಗೂ ರಾಜಕೀಯದಲ್ಲಿ ಮಹತ್ತರವಾಗಿ ತೊಡಗಿಸಿಕೊಂಡು ಕಳೆದ ಮೂರು ತಲೆಮಾರುಗಳಿಂದ ಸಮಾಜಮುಖಿಯಾಗಿ ದಾಖಲಾರ್ಹ ಕೊಡುಗೆಯನ್ನು ನೀಡುತ್ತಾ ಬಂದಿದೆ.

    ಸಹಕಾರಿ ಕ್ಷೇತ್ರದ ಶಕ್ತಿ ಕಲ್ಲಯ್ಯಸ್ವಾಮಿ ಕವಟಗಿಮಠ:

    ಮಹಾಂತೇಶ ಕವಟಗಿಮಠ ಅವರ ಅಜ್ಜನವರಾದ ಕಲ್ಲಯ್ಯನವರು ಪ್ರಯತ್ನ ಶೀಲತೆಗೆ ವ್ಯಾಖ್ಯಾನವಾಗಿದ್ದರು. ಕೃಷಿ, ವಾಣಿಜ್ಯಗಳಲ್ಲದೇ ಸಹಕಾರಿ ಕ್ಷೇತ್ರದಲ್ಲಿ ಯೂತಮ್ಮ ಹೆಜ್ಜೆಗುರುತುಗಳನ್ನು ಅಚ್ಚಳಿಯದೆ ಮೂಡಿಸಿದ್ದರು.

    ಹತ್ತೊಂಬತ್ತರ ಹರೆಯದಲ್ಲಿಯೇ ಸಹಕಾರಿ ಕ್ಷೇತ್ರಕ್ಕೆ ಕಾಲಿರಿಸಿ, ಚಿಕ್ಕೋಡಿ ಭಾಗದಲ್ಲಿ ಸಹಕಾರಿ ತತ್ವವನ್ನು ಪ್ರಚಾರಗೊಳಿಸಿದ ಶ್ರೇಯಸ್ಸು ಕಲ್ಲಯ್ಯ ಸ್ವಾಮಿಯವರಿಗೆ ಸಲ್ಲುತ್ತದೆ. ಸಹಕಾರ ತತ್ವಗಳ ಅನುಷ್ಠಾನಕ್ಕೆ ಕಟಿಬದ್ಧರಾಗಿ ಅಂದು ಗೆಳೆಯರೊಂದಿಗೆ ಚಿಕ್ಕೋಡಿ ಭಾಗದಲ್ಲಿ ನೆಟ್ಟ ಸಹಕಾರದ ಮರಇಂದು ಹೆಮ್ಮರವಾಗಿ ಬೆಳೆದಿದೆ.

    ಚಿಕ್ಕೋಡಿಯ ಭಾಗದಲ್ಲಿ ಸಹಕಾರಕ್ಷೇತ್ರದ ಮೊದಲ ಸಂಸ್ಥೆ ಎಲ್.ಎಸ್.ಎಂ.ಪಿ. ಸೊಸೈಟಿಯು 1914ರಲ್ಲಿ ಸ್ಥಾಪನೆಗೊಂಡಿತು. 1914 ರಿಂದ 1949ರ ವರೆಗೂ ಅವರು ಈ ಸಂಸ್ಥೆಯ ಕಾರ್ಯಕಾರಿ ಸದಸ್ಯರಾಗಿ ಕೆಲವು ಅವಧಿಗೆ ಅವರು ಈ ಸಂಸ್ಥೆಯ ಚೇಅರ್‌ಮನ್‌ರಾಗಿ ಸೇವೆಸಲ್ಲಿಸಿದರು.

    ಕಲ್ಲಯ್ಯಸ್ವಾಮಿಯವರು ಸತತ ಇಪ್ಪತ್ತೈದು ವರ್ಷಗಳ ಕಾಲ ತಾಲೂಕಾ ಅಭಿವೃದ್ಧಿ ಸಂಘದ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಚಿಕ್ಕೋಡಿ ಭಾಗದಲ್ಲಿ ಜನಹಿತ ಕಾರ್ಯಗಳಲ್ಲಿ ತೊಡಗಿದರು. ಹದಿನಾರು ವರ್ಷಗಳ ಕಾಲ ಕೆ.ಎಲ್.ಇ ಸಂಸ್ಥೆ ನಿರ್ದೇಶಕರಾಗಿ, ಚಿಕ್ಕೋಡಿ ತಾಲೂಕಾ ಕೋ ಆಪರೇಟಿವ್ ಸುಪರ್‌ವೈಸಿಂಗ್ ಸಿಬ್ಬಂದಿಗಳ ಸಂಘದ ಚೇರ್‌ಮನ್‌ರಾಗಿ, ಬೆಳಗಾವಿ ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಕೋ ಆಪರೇಟಿವ್ ಇನಸ್ಟಿಟ್ಯೂಟ್ ಬೆಳಗಾವಿಯ ನಿರ್ದೇಶಕರಾಗಿ, ಖರೀದಿ ಮತ್ತು ಮಾರಾಟಗಾರರ ಯೂನಿಯನ್ ಬೆಳಗಾವಿಯ ನಿರ್ದೇಶಕರಾಗಿ, ಡಿಸ್ಟಿಕ್ಟ್ ಲ್ಯಾಂಡ್ ಮಾರ್ಟಗೇಜ್ ಬ್ಯಾಂಕ್‌ನ ನಿರ್ದೇಶಕರಾಗಿ, ಡಿ.ಸಿ.ಸಿ. ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾಗಿ, ಬೆಳಗಾವಿ ಜಿಲ್ಲೆಯ ಕೇಂದ್ರ ಸಹಕಾರಿ ಬ್ಯಾಂಕಿನ ಚಿಕ್ಕೋಡಿ ಶಾಖೆಯ ಚೇರ್‌ಮನ್‌ರಾಗಿ ಆಯ್ಕೆಗೊಂಡು ಸಲ್ಲಿಸಿದ ಸೇವೆ ಅನುಪಮ ಹಾಗೂ ಚಿರಸ್ಮರಣೀಯ.

    ರೈತರ ಮನೆಬಾಗಿಲಿಗೆ ಅನೇಕ ಸೌಲಭ್ಯಗಳು ತಲುಪುವಂತೆ ಕಾರ್ಯವೆಸಗಿ ಸಹಕಾರ ಚಳವಳಿಗೆ ಜೀವತುಂಬಿದರು. ಹೀಗಾಗಿ ಚಿಕ್ಕೋಡಿಯ ಭಾಗದ ಜನಮಾನಸದಲ್ಲಿ ಕಲ್ಲಯ್ಯಸ್ವಾಮಿಗಳು ಇಂದಿಗೂ ಪ್ರಾತಃಸ್ಮರಣೀಯರು.

    ಕಲ್ಲಯ್ಯಸ್ವಾಮಿಗಳ ಕಾರ್ಯವ್ಯಾಪ್ತಿ ಬೆಳಗಾವಿ ಜಿಲ್ಲೆಯನ್ನೂ ಮೀರಿ ಮುಂಬೈ ಕರ್ನಾಟಕ ಮಟ್ಟಕ್ಕೆ ಏರಿತು. ಅವರನ್ನು “ಮುಂಬೈ ಕರ್ನಾಟಕ ಏರಿಯಾ ಕೋ ಆಪರೇಟಿವ್ ಅಡ್ವೆöಸರಿ ಕಮೀಟಿ ಧಾರವಾಡ”ದ ಸದಸ್ಯರನ್ನಾಗಿ ನೇಮಕ ಮಾಡಲಾಯಿತು. ಹಾಗೆಯೇ “ಮುಂಬೈ ಪ್ರಾವ್ಹಿಜನ್ ಕೋ ಆಪರೇಟಿವ್ ಬೋರ್ಡ್”ನ ಸದಸ್ಯರನ್ನಾಗಿಯೂ ನೇಮಿಸಲಾಯಿತು ಎಂದರೆ ಅವರ ಸಹಕಾರಿ ಕ್ಷೇತ್ರದ ವ್ಯಾಪ್ತಿಗೆ ಹಿಡಿದ ಕನ್ನಡಿಯಾಗಿದೆ. ಮಾತ್ರವಲ್ಲ ಕಲ್ಲಯ್ಯಸ್ವಾಮಿಗಳು ಭಾರತದ ಸ್ವಾತಂತ್ರ್ಯದ ಚಳುವಳಿಯಲ್ಲಿ ಸಕ್ರಿಯ ಪಾತ್ರವನ್ನು ನಿರ್ವಹಿಸಿದವರು. ಮಹಾತ್ಮಾ ಗಾಂಧೀಜಿಯವರ ಕರೆಯ ಮೇರೆಗೆ ಸ್ವದೇಶಿ ಚಳುವಳಿಯಲ್ಲಿ ಭಾಗವಹಿಸಿ ಖಾದಿಯ ಉಡುಪುಗಳನ್ನೇ ಕೊನೆಯವರೆಗೂ ಧರಿಸಿದರು.

    ಕೆ.ಎಲ್.ಇ. ಸಂಸ್ಥೆಯ ನಿರ್ದೇಶಕರಾಗಿ, ಚಿಕ್ಕೋಡಿಯ ಆರ್.ಡಿ.ಹೈಸ್ಕೂಲು ಕಮೀಟಿಯ ಖಾಯಂ ಸದಸ್ಯರಾಗಿ, ಬೆಳಗಾವಿ ಜಿಲ್ಲೆಯ ಸ್ಕೂಲ್ ಬೋರ್ಡಿನ ಚೇಅರ್‌ಮನ್‌ರಾಗಿ, ಹೀಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಮೌಲಿಕ ಸೇವೆ ಸಲ್ಲಿಸಿದವರು.


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.