nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    • ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    • ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ
    • ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ
    • ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ವಿಭಾಗ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.32 ಕೋಟಿ ಮೌಲ್ಯದ ಮಾಲುಗಳ ವಶ
    ರಾಜ್ಯ ಸುದ್ದಿ August 11, 2022

    ಕೇಂದ್ರ ವಿಭಾಗ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.32 ಕೋಟಿ ಮೌಲ್ಯದ ಮಾಲುಗಳ ವಶ

    By adminAugust 11, 2022No Comments3 Mins Read
    police

    ಕೇಂದ್ರ ವಿಭಾಗದ ಶೇಷಾದ್ರಿಪುರಂ, ಕಬ್ಬನ್‍’ಪಾರ್ಕ್, ಹಲಸೂರು ಗೇಟ್, ವಿಲ್ಸನ್ ಗಾರ್ಡನ್, ಎಸ್‍’ಜೆ ಪಾರ್ಕ್ ಮತ್ತು ವೈಯ್ಯಾಲಿಕಾವಲ್ ಠಾಣೆ ಪೊಲೀಸರು ವಿವಿಧ ಪ್ರಕರಣಗಳಲ್ಲಿ 24 ಮಂದಿ ಆರೋಪಿಗಳನ್ನು ಬಂಧಿಸಿ 30 ಪ್ರಕರಣಗಳನ್ನು ಪತ್ತೆಹಚ್ಚಿ ನಗದು ಸೇರಿದಂತೆ 1.32 ಕೋಟಿ ಬೆಲೆಬಾಳುವ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

    ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಕಬ್ಬನ್‍’ಪಾರ್ಕ್ ಠಾಣೆ ಪೊಲೀಸರು 74 ಹಾಗೂ ಶೇಷಾದ್ರಿಪುರಂ ಠಾಣೆ ಪೊಲೀಸರು 13 ಮೊಬೈಲ್‍ಗಳು ಸೇರಿದಂತೆ ಒಟ್ಟು 87 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 7.80 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

    ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಶೇಷಾದ್ರಿಪುರಂ ಠಾಣೆ ಪೊಲೀಸರು 14, ಕಬ್ಬನ್‍ ಪಾರ್ಕ್ 4, ಎಸ್‍ ಜೆ ಪಾರ್ಕ್ 4 ಹಾಗೂ ವಯ್ಯಾಲಿಕಾವಲ್ ಠಾಣೆ ಪೊಲೀಸರು 5 ದ್ವಿಚಕ್ರ ವಾಹನ ಸೇರಿ 27 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 13.50 ಲಕ್ಷ ರೂ.ಗಳಾಗಿದೆ.

    ಚಿನ್ನಾಭರಣ ಕಳ್ಳತನ ಪ್ರಕರಣದಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು 296 ಗ್ರಾಂ ಹಾಗೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು 44 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದು, 17.30 ಲಕ್ಷ ರೂ. ಮೌಲ್ಯದ 340 ಗ್ರಾಂ ಚಿನ್ನಾಭರಣ ವಶಪಡಿಸಿ ಕೊಳ್ಳಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರು 45 ಲಕ್ಷ ರೂ. ಮೌಲ್ಯದ 7 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

    ಹಲಸೂರು ಗೇಟ್ ಠಾಣೆ ಪೊಲೀಸರು 58 ಕೆಜಿ ಬೆಳ್ಳಿ ಹಾಗೂ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು 500 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 34.90ರೂ.ಗಳಾಗಿವೆ. ಹಲಸೂರು ಗೇಟ್ ಠಾಣೆ ಪೊಲೀಸರು 4.39 ಲಕ್ಷ ನಗದು ಹಾಗೂ ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು 2 ಲಕ್ಷ ನಗದು ಸೇರಿ ಆರೋಪಿಗಳಿಂದ ಒಟ್ಟು 6.39 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.ಬ್ಯಾಂಕ್‍ನಲ್ಲಿ 7.50 ಲಕ್ಷ ಹಣವನ್ನು ಫ್ರೀಜ್‍ ಮಾಡಲಾಗಿದೆ.

    ಮೊಬೈಲ್ ದರೋಡೆ ಪ್ರಕರಣಗಳು: ಕಬ್ಬನ್‍ಪಾರ್ಕ್ ಹಾಗೂ ಅಶೋಕನಗರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಐದು ಮಂದಿಯನ್ನು ಬಂಧಿಸಿ ಸುದ್ದಗುಂಟೆಪಾಳ್ಯ, ಅಶೋಕನಗರ, ಹೈಗ್ರೌಂಡ್ಸ್, ಮಾಗಡಿ ರಸ್ತೆ ಮತ್ತು ಶ್ರೀರಾಂಪುರ ಠಾಣಾ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದ 74 ಮೊಬೈಲ್‍ ಗಳು, 4 ದ್ವಿಚಕ್ರ ವಾಹನ, 2 ಲಕ್ಷ ಹಣ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 13 ಲಕ್ಷ ರೂ.ಗಳಾಗಿದೆ.

    ಬಂಧಿತರ ಪೈಕಿ ಇಬ್ಬರು ಹಳೆ ಆರೋಪಿಗಳಾಗಿದ್ದು, ಸಾರ್ವಜನಿಕರು ನಡೆದು ಹೋಗುವಾಗ ಅವರ ಕೈಯಿಂದ ಮೊಬೈಲ್ ಕಿತ್ತುಕೊಂಡು ಬೇರೆ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದರು.

    ದರೋಡೆ ಪ್ರಕರಣಗಳು: ಶೇಷಾದ್ರಿಪುರಂ ಠಾಣೆ ಪೊಲೀಸರು ಆರು ಮಂದಿಯನ್ನು ಬಂಧಿಸಿ 80 ಸಾವಿರ ಬೆಲೆಬಾಳುವ 13 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೆಳಗಿನ ಜಾವ ವಾಯುವಿಹಾರ ಮಾಡುವವರನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದರು.

    ಮನೆ ಕನ್ನಗಳವು ಪ್ರಕರಣಗಳು: ಹಲಸೂರು ಗೇಟ್ ಠಾಣೆ ಪೊಲೀಸರು ಬಾಡಿ ವಾರೆಂಟ್ ಪಡೆದು ಹಳೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ 6.50 ಲಕ್ಷ ಬೆಲೆಬಾಳುವ 100 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ, 39 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ 65 ಪ್ರಕರಣಗಳು ದಾಖಲಾಗಿವೆ.

    ಬೆಳ್ಳಿ ವಶ: ಹಲಸೂರು ಗೇಟ್ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ 14 ಕೆಜಿ, 380 ಗ್ರಾಂ ತೂಕದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ 30 ಸಾವಿರ ಬೆಲೆಬಾಳುವ 500 ಗ್ರಾಂ ಬೆಳ್ಳಿ ಚೈನ್, ಬ್ರೇಸ್‍ಲೆಟ್, ಮೊಬೈಲ್ ವಶಪಡಿಸಿಕೊಂಡಿದ್ದಾರೆ.

    ಮಾಗಡಿ ಮೂಲದ ಮೂವರು ಆರೋಪಿಗಳನ್ನು ಮತ್ತೊಂದು ಪ್ರಕರಣದಲ್ಲಿ ಬಂಧಿಸಿ 40 ಕೆಜಿ ಬೆಳ್ಳಿ ಗಟ್ಟಿ, 196 ಗ್ರಾಂ ಚಿನ್ನದ ಆಭರಣ, 4 ಲಕ್ಷ ನಗದು ವಶಪಡಿಸಿಕೊಂಡಿದ್ದು, ಇವರು ಜ್ಯುವೆಲರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಆರೋಪಿ ಗಳು ಆಗಿಂದಾಗ್ಗೆ ಬೆಳ್ಳಿಯನ್ನು ಅಂಗಡಿ ಯಿಂದಲೇ ಕಳವು ಮಾಡುತ್ತಿದ್ದುದು ವಿಚಾರಣೆಯಿಂದ ಗೊತ್ತಾಗಿದೆ.

    ಕಳವು ಪ್ರಕರಣ: ಕಬ್ಬನ್‍ಪಾರ್ಕ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ 2 ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ 2.50 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

    ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಿವಾಸಗೌಡ, ಕಬ್ಬನ್‍ಪಾರ್ಕ್ ಉಪವಿಭಾಗದ ಎಸಿಪಿ ರಾಜೇಂದ್ರ, ಹಲಸೂರು ಗೇಟ್ ಉಪವಿಭಾಗದ ಎಸಿಪಿ ನಾರಾಯಣಸ್ವಾಮಿ, ಶೇಷಾದ್ರಿಪುರಂ ಉಪವಿಭಾಗದ ಎಸಿಪಿ ಚಂದ್ರನ್‍ಕುಮಾರ್ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್‍ಗಳಾದ ಚೈತನ್ಯ, ರವಿ, ಜಗದೀಶ್, ರಾಜು, ಶ್ರೀನಿವಾಸ್ ಹಾಗೂ ಸತೀಶ್‍ಕುಮಾರ್ ಈ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದು, ಈ ಪತ್ತೆ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ

    July 29, 2026

    ತುಮಕೂರು: ಮಳೆ ಕೊರತೆ, ಬರದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ರೈತರು ಬೆಳೆ ನಷ್ಟ ತಪ್ಪಿಸಿಕೊಳ್ಳಲು ಫಸಲ್ ಬಿಮಾ (ವಿಮಾ) ಯೋಜನೆಯಡಿ…

    ತುಮಕೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

    July 29, 2026

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.