ತಿಪಟೂರು: ತಾಲ್ಲೂಕಿನ ರಂಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹೊಸಳ್ಳಿ ಗ್ರಾಮದ ದೊಡ್ಡಮ್ಮ ದೇವಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1.50 ಲಕ್ಷ ರೂ.ಗಳ ಮೊತ್ತವನ್ನು ಮಂಜೂರುಗೊಳಿಸಿದ್ದಾರೆ.
ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಉದಯ್.ಕೆ ರವರು ಮೊತ್ತದ ಡಿ ಡಿಯನ್ನು ಗ್ರಾಮಸ್ಥರಿಗೆ ವಿತರಿಸಿದರು.
ಸಂದರ್ಭದಲ್ಲಿ ದೊಡ್ಡಮ್ಮದೇವಿ ದೇವಸ್ಥಾನ ಸಮಿತಿಯ ಸದಸ್ಯರಾದ ನರಸಿಂಹರಾಜು, ಶಂಕರಲಿಂಗಯ್ಯ, ಗೌರಿಶಂಕರ್, ರಂಗಸ್ವಾಮಿ, ಮೋಹನ್ ಕುಮಾರ್, ವಿಜಯನರಸಿಂಹ, ಸೇವಾಪ್ರತಿನಿಧಿ ರೂಪ ಹಾಗೂ ಹೊಸಹಳ್ಳಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4