ಬೆಂಗಳೂರು: ಬಾಯಲ್ಲಿ ಕನ್ನಡ…ಆದ್ರೆ ರಾಜ್ಯ ಸರ್ಕಾರ ರಾಜ್ಯದ ಉತ್ಪನ್ನವನ್ನೇ ಕಡೆಗಣಿಸಿದೆ ಎನ್ನುವ ಆಕ್ರೋಶ ಇದೀಗ ಕೇಳಿ ಬಂದಿದೆ. ಬೆಂಗಳೂರಿನ ಮೆಟ್ರೋದಲ್ಲಿ ರಾಜ್ಯದ ನಂದಿನಿ ಹಾಲು ಉತ್ಪನ್ನಗಳ ಮಳಿಗೆಗಳ ಬದಲು, ಅಮುಲ್ ಉತ್ಪನ್ನಗಳಿಗೆ ಮಣೆ ಹಾಕಲಾಗಿದೆ.
ಬೆಂಗಳೂರಿನ ಮೆಟ್ರೋದಲ್ಲಿ ಅಮೂಲ್ ಉತ್ಪನ್ನಗಳ ಮಳಿಗೆ ಪ್ರಾರಂಭಿಸುವುದಕ್ಕೆ ಬಿಎಂಆರ್ಸಿಎಲ್ ಅವಕಾಶ ಮಾಡಿಕೊಟ್ಟಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಇತ್ತೀಚೆಗೆ ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಲಿಮಿಟೆಡ್ ಅಥವಾ ಅಮುಲ್ ಜೊತೆ ನಿಲ್ದಾಣಗಳಲ್ಲಿ ಕಿಯೋಸ್ಕ್ಗಳನ್ನು ಸ್ಥಾಪಿಸಲು ಪರವಾನಗಿ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್ ಎಂ ವಿಶ್ವೇಶ್ವರಯ್ಯ, ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್), ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿ ನಿಲ್ದಾಣಗಳಲ್ಲಿ ಕಿಯೋಸ್ಕ್ಗಳನ್ನು ಸ್ಥಾಪಿಸಲು ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಬಿಎಂಆರ್ ಸಿಎಲ್ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW