ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಯಾತ್ರಾರ್ಥಿಗಳ ಭಾರಿ ದಟ್ಟಣೆಯ ಹಿನ್ನೆಲೆಯಲ್ಲಿ, ಸರ್ಕಾರವು ದರ್ಶನದ ಸಮಯವನ್ನು ಒಂದು ಗಂಟೆ ವಿಸ್ತರಿಸಿದೆ. ಈ ಮೂಲಕ ಅಯ್ಯಪ್ಪನ ಭಕ್ತರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರು ತಂತ್ರಿ ಕಾಂತಾರು ಮಹೇಶ್ ಮೋಹನರು ಅವರೊಂದಿಗೆ ಭಾನುವಾರ ನಡೆಸಿದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಭಾನುವಾರ ಮಧ್ಯಾಹ್ನ 3 ಗಂಟೆಗೆ ದೇವಾಲಯದ ನಾಡವನ್ನು ತೆರೆಯುವ ಮೂಲಕ ಈ ನಿರ್ಧಾರವನ್ನು ತಕ್ಷಣ ಜಾರಿಗೆ ತರಲಾಯಿತು. ಯಾತ್ರಾ ಋತುವಿನಲ್ಲಿ ಪ್ರತಿದಿನ ಮಧ್ಯಾಹ್ನ 3 ಗಂಟೆಗೆ ನಾಡವನ್ನು ತೆರೆಯಲಾಗುತ್ತದೆ.
ಎಲ್ಲಾ ಯಾತ್ರಾರ್ಥಿಗಳಿಗೆ ಸುಗಮ ದರ್ಶನವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ಮಂಡಳಿ ಬಯಸಿದೆ ಎಂದು ದೇವಸ್ವಂ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.


