ಕ್ಯಾಲಿಫೋರ್ನಿಯಾ: ಸಾಕು ನಾಯಿ ಕಚ್ಚಿದ ಪರಿಣಾಮ 1 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಮನೆಯವರು ಮಗುವಿನ ಮೇಲೆ ಗಮನ ನೀಡದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಕ್ಯಾಲಿಫೋರ್ನಿಯಾದ ಟೊರೆನ್ಸ್‌ನಲ್ಲಿ ಮಾರ್ಥಾ ಅವೆನ್ಯೂನಲ್ಲಿರುವ ಮನೆಯಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ 1 ತಿಂಗಳ ಮಗುವಿಗೆ ನಾಯಿ ಕಚ್ಚಿತ್ತು. ಈ ವೇಳೆ ಕುಟುಂಬಸ್ಥರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಗು ಬದುಕುಳಿಯಲಿಲ್ಲ.
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಮಗುವಿನ ಕುಟುಂಬದ ಸ್ನೇಹಿತೆ ಫಾಯೆ ತೋಹಿಡಿ, ಇದು ನಿಜಕ್ಕೂ ದುರಂತ, ಮಗುವಿನ ಮೇಲೆ ಹೆಚ್ಚಿನ ಗಮನ ನೀಡಬೇಕಿತ್ತು ಎಂದು ಹೇಳಿದ್ದಾರೆ.
ಟಾರೆನ್ಸ್ ಅನಿಮಲ್ ಕಂಟ್ರೋಲ್ ಅಧಿಕಾರಿಗಳು ಮಗುವನ್ನು ಕಚ್ಚಿದ ನಾಯಿಯನ್ನು ಮನೆಯಿಂದ ಹೊರತೆಗೆದಿದ್ದಾರೆ ಮತ್ತು ಮುಂದಿನ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296