ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಸಿ. ಹೊರಕೇರಪ್ಪ ಹಾಗೂ ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಕರೆನ್ಸಿ ಮೀಟರ್ ಅಳವಡಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ.ಹೊರಕೇರಪ್ಪ, ರಾಜ್ಯದ ಎಲ್ಲಾ ಸರ್ಕಾರಗಳು ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸುತ್ತಿತ್ತು. ಪ್ರಸ್ತುತ ರೈತರು ಅತಿವೃಷ್ಟಿ, ಅನಾವೃಷ್ಟಿ, ಬೆಲೆ ಇಳಿಕೆ, ಬೆಳೆಗಳಿಗೆ ಸಾಂಕ್ರಾಮಿಕ ರೋಗ ತಗುಲಿ ಬೆಳೆನಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಕರೆನ್ಸಿ ಮೀಟರ್ ಅಳವಡಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ರೈತರು ಬೆಳೆದಿರುವ ಬೆಳೆದಿರುವ ಬೆಳೆಗಳಿಗೆ ಸೂಕ್ತ ಬೆಳೆಗಳು ಸಿಗದೇ ರೈತರು ನಷ್ಟ ಅನುಭವಿಸುತ್ತಿದ್ದಾರೆ. ರೈತರು ಸಾಲಗಾರರಾಗುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಏಕಾಏಕಿ ವಿದ್ಯುತ್ ಖಾಸಗೀಕರಣ ಮಾಡುವ ಮುಖಾಂತರ ರೈತರ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಹಾಕಲು ಮುಂದಾಗಿರುವುದು ರೈತರಿಗೆ ಮರಣ ಶಾಸನ ಬರೆದಂತಾಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.
ಶಿವಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧಿ ಕಾನೂನುಗಳನ್ನ ವಾಪಾಸು ಪಡೆದು ಮತ್ತೆ 2022ಕ್ಕೆ ರೈತ ವಿರೋಧಿ ಸ್ಮಾರ್ಟ್ ಮೀಟರ್ ಜಾರಿಗೆ ತರುತ್ತಿರುವುದು ಎಷ್ಟರ ಮಟ್ಟಿಗೆ ಸರಿ, ಈ ವಚನ ಭ್ರಷ್ಟ ಸರ್ಕಾರ ಕೂಡಲೇ ವಿದ್ಯುತ್ ಖಾಸಗೀಕರಣ ನಿಲ್ಲಿಸಬೇಕು ಎಂದರಲ್ಲದೆ, ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಜಮೀನುಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸುವ ವಿದ್ಯುತ್ ಖಾಸಗೀಕರಣ ನಿಲ್ಲಿಸದೇ ಮೊಂಡುತನ ಪ್ರದರ್ಶಿಸಿದರೆ ರೈತಸಂಘದ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘಟನೆ ಹಿರಿಯೂರು ತಾಲ್ಲೂಕು ತಹಸೀಲ್ದಾರರಾದ ಪ್ರಶಾಂತ ಕೆ ಪಾಟೀಲ ಅವರ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತಸಂಘದ ಯುವಘಟಕದ ತಾಲ್ಲೂಕು ಅಧ್ಯಕ್ಷರಾದ ಆರ್. ಚೇತನಯಳನಾಡು, ರೈತಮುಖಂಡರುಗಳಾದ ಎಂ.ಆರ್.ಪುಟ್ಟಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ವೀರಣ್ಣ, ಬಿ.ಡಿ.ಶ್ರೀನಿವಾಸ್, ಜಿ.ಗೋವಿಂದಪ್ಪ, ಎಂ.ನಾಗರಾಜ, ಹೆಚ್.ಆರ್.ತಿಪ್ಪೇಸ್ವಾಮಿ, ಎ.ತಿಪ್ಪೇರುದ್ರಪ್ಪ, ನಿತ್ಯಶ್ರೀ, ಅಂಜಿನಪ್ಪ, ಎಸ್.ಚಿಕ್ಕತಿಮ್ಮಯ್ಯ, ಕೆ.ಎಂ.ಶ್ರೀನಿವಾಸ್, ಮಹಂತೇಶ್, ತಿಪ್ಪೇಸ್ವಾಮಿ, ರಂಗಸ್ವಾಮಿ, ಗಿರೀಶ್, ಪಿ.ನಾಗರಾಜ, ಕೆ.ರುದ್ರಪ್ಪ, ಹೆಚ್.ದಸ್ತಗೀರ್ ಸಾಬ್, ಮಹಿಳಾ ಘಟಕದ ಅಧ್ಯಕ್ಷೆ ವಿ.ಕಲ್ಪನಾ, ಲಕ್ಷ್ಮೀದೇವಿ, ಎಸ್.ಶಿವರಾಂ, ನಾಗರಾಜ, ವೀರಣ್ಣ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


