ಬೆಂಗಳೂರು: ಹೈಕೋರ್ಟ್ ಉದ್ಯೋಗಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಯತ್ನಿಸಿದ್ದ ಗ್ಯಾಂಗ್ ಅನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿಯನ್ನು ಬಂಧಿಸಲಾಗಿದೆ. ಹೈಕೋರ್ಟ್ ಉದ್ಯೋಗಿ ಜೈರಾಮ್ ಎಂಬುವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದರು. ಆರೋಪಿ ಅನುರಾಧ, ಕಾವ್ಯಾ, ಸಿದ್ದರಾಜು ಎಂಬುವರು ಎರಡು ವರ್ಷದಿಂದ ಜೈರಾಮ್ಗೆ ಪರಿಚಿತರಾಗಿದ್ದರು.
ಪ್ರಕರಣ ಸಂಬಂಧ ಕೋರ್ಟ್ಗೆ ಬಂದಾಗ ಅನುರಾಧ ಎಂಬುವರಿಗೆ ಜೈರಾಮ್ ಪರಿಚಯವಾಗಿತ್ತು. ಮನೆಯಲ್ಲಿ ಶಾರ್ಟ್ ಸೆರ್ಕ್ಯೂಟ್ನಿಂದ ಬೆಂಕಿ ತಗುಲಿ ಮನೆಗೆ ಹಾನಿಯಾಗಿದೆ ಎಂದು ಹೇಳಿ ಜೈರಾಮ್ನಿಂದ ಅನುರಾಧ 10 ಸಾವಿರ ರೂ. ಸಾಲ ಪಡೆದುಕೊಂಡಿದ್ದಳು. ಅಕ್ಟೋಬರ್ 10ರಂದು ಹಣ ಹಿಂತಿರುಗಿಸಿದ್ದು, ಮತ್ತೆ 5 ಸಾವಿರ ಕೇಳಿದ್ದಳು. ಆಕೆಗೆ ಸಾಲ ಕೊಡಲು ಆಕೆಯ ಮನೆಗೆ ಬಂದಾಗ ಜೈರಾಮ್ರನ್ನು ಹಿಡಿದುಕೊಂಡಿದ್ದ ಇತರ ಆರೋಪಿಗಳು, ಅಲ್ಲಿಯೇ ಆತನನ್ನು ಬಂಧಿಸಿ, ಎರಡು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದರು.
ಆರೋಪಿ ಒಬ್ಬ ತನ್ನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ದೂರು ನೀಡುವುದಾಗಿ ಬೆದರಿಸಿದ್ದ.ಜೈರಾಮ್ ಹಣ ಕೊಡಲು ಒಪ್ಪಲಿಲ್ಲ. ಬಳಿಕ ಅವರ ಮೇಲೆ ಹಲ್ಲೆ ಮಾಡಿ ಬಿಟ್ಟು ಕಳುಹಿಸಿದ್ದರು. ನಂತರ ಈ ಬಗ್ಗೆ ಕಾಮಾಕ್ಷಿಪಾಳ್ಯ ಠಾಣೆಗೆ ಜೈರಾಮ್ ದೂರು ನೀಡಿದ್ದರು. ಈ ಹಿನ್ನೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


