ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ 10 ದಿನಗಳವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಹಗಲಿನಲ್ಲೂ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಎಂದು ತಿಳಿಸಿದರು.
ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ 50:50 ನಿಯಮ ಜಾರಿಗೊಳಿಸಿದ ಕರ್ನಾಟಕ ಸರ್ಕಾರ, ಸಿನಿಮಾ ಥಿಯೇಟರ್ಗಳಿಗೆ ಸದ್ಯ ಈ ನಿಮಯ ಅನ್ವಯವಾಗುವುದಿಲ್ಲ ಎಂದು ಸುಧಾಕರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy