ಗುಬ್ಬಿ: ತಾಲ್ಲೂಕಿನ ದೊಡ್ಡ ಕಟ್ಟೀಗೆನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿದ ಪರಿಣಾಮ 8 ಕುರಿಗಳ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಶಿವಣ್ಣ ಎಂಬವರಿಗೆ ಸೇರಿದ ರೊಪ್ಪದಲ್ಲಿ ಇದ್ದ ಒಟ್ಟು 10 ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, 8 ಕುರಿಗಳನ್ನು ಕೊಂದು ಹಾಕಿದೆ. ಘಟನೆಯಲ್ಲಿ ಎರಡು ಕುರಿಗಳು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದೆ.
ಈ ಭಾಗದಲ್ಲಿ ಹಲವು ಬಾರಿ ಚಿರತೆ ದಾಳಿ ನಡೆದರೂ, ಅರಣ್ಯ ಇಲಾಖೆ ಕ್ರಮವಹಿಸುತ್ತಿಲ್ಲ. ಹೀಗಾಗಿ ಮತ್ತೆ ಮತ್ತೆ ಇಂತಹ ಘಟನೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5