ನವದೆಹಲಿ: ಛತ್ತೀಸ್ ಗಢದಲ್ಲಿ ನಕ್ಸಲರ ದಾಳಿಯಲ್ಲಿ ವ್ಯಾನ್ ಚಾಲಕ ಸೇರಿ 10 ಪೊಲೀಸರು ಹುತಾತ್ಮರಾಗಿದ್ದಾರೆ. ಸುಧಾರಿತ ಸ್ಪೋಟಕ ಬಳಕೆ ಮಾಡಿ ಮಿನಿ ವ್ಯಾನ್ ನಲ್ಲಿ ಸಂಚಾರ ನಡೆಸುತ್ತಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ಈ ದಾಳಿ ನಡೆಸಿದ್ದಾರೆ.
ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರು ವಾಪಸ್ ಆಗುವಾಗ ಈ ದಾಳಿ ನಡೆಸಲಾಗಿದೆ.
ಛತ್ತೀಸ್ ಗಢದ ಮುಖ್ಯಮಂತ್ರಿಗಳು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಕ್ಷಣವೇ ನಕ್ಸಲರ ವಿರುದ್ಧ ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದಾಳಿಯ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಜೊತೆ ಮಾತುಕತೆ ನಡೆಸಿದರು. ನಕ್ಸಲರ ವಿರುದ್ಧದ ಕಾರ್ಯಾಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


