ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಅಮರನಾಥ್ (15) ಟ್ಯೂಷನ್ ಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಬಾಲಕನನ್ನು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ.
ಚೆರುಕುಪಲ್ಲಿ ಮಂಡಲದ ರಾಜವೋಲು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಅಮರನಾಥ್ ಸೈಕಲ್ ನಲ್ಲಿ ಟ್ಯೂಷನ್ ಗೆ ತೆರಳುತ್ತಿದ್ದಾಗ ಕೆಲ ಯುವಕರು ಬಾಲಕನನ್ನುತಡೆದಿದ್ದಾರೆ.ನಂತರ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.ಬಾಲಕನ ಕಿರುಚಾಟ ಕೇಳಿ ಸ್ಥಳೀಯರು ಅಮರನಾಥ ಆಸ್ಪತ್ರೆಗೆ ಧಾವಿಸಿದರೂ ಆತನ ಪ್ರಾಣ ಉಳಿಸಲಾಗಲಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


