ಬೆಂಗಳೂರು: ಬಿಎಂಟಿಸಿ ಬಸ್ ಹರಿದು 10 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ಗುರುವಾರ ನಡೆದಿದೆ.
ತನ್ವಿ (10) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಮಿಲೆನಿಯಂ ಸ್ಕೂಲ್ ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ವಿ, ತನ್ನ ತಾಯಿ ಹರ್ಷಿತಾ ಜೊತೆಗೆ ಸ್ಕೂಟಿಯಲ್ಲಿ ಸ್ಕೂಲ್ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಯಲಹಂಕದ ಕೋಗಿಲು ಮುಖ್ಯ ರಸ್ತೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಹರ್ಷಿತಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಸ್ಕಿಡ್ ಆಗಿದೆ. ಈ ವೇಳೆ ವಾಹನದಿಂದ ಕೆಳಗೆ ಬಿದ್ದ ಬಾಲಕಿಯ ತಲೆ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದಿದ್ದು, ಬಾಲಕಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾಳೆ.
ಘಟನೆ ಬೆನ್ನಲ್ಲೇ ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಬಿಎಂಟಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC