ಬೆಂಗಳೂರು : ರಾಜ್ಯ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರೇತರದ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ನೇತೃತ್ವದ ನಿಯೋಗ ಹಸ್ತಾಂತರಿಸಿದರು.
ರಾಜ್ಯ ಸರ್ಕಾರಿ ನೌಕರರು ಮತ್ತು ಸರ್ಕಾರದ ಇತರ ಸಂಸ್ಥೆಗಳ ನೌಕರರು ಸ್ವ-ಇಚ್ಛೆಯಿಂದ ದೇಣಿಗೆ ನೀಡಲು ಮುಂದಾಗಿದ್ದು, ಗ್ರೂಪ್ ಎ ಅಧಿಕಾರಿಗಳು 11,000 ರೂ., ಗ್ರೂಪ್ ಬಿ ಅಧಿಕಾರಿಗಳು 4000 ರೂ. ಹಾಗೂ ಸಿ ವೃಂದದ ನೌಕರರು 400 ರೂ. ದೇಣಿಗೆಯನ್ನು ಒಂದು ಬಾರಿಗೆ ಪಾವತಿಸಲು ಸಮ್ಮತಿಸಿದ್ದಾರೆ.
ಇದನ್ನು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ವೇತನದಲ್ಲಿ ತೆಗೆದುಕೊಳ್ಳಲು ಕೋರಿದ್ದಾರೆ. ಈ ಮೊತ್ತವು ಸುಮಾರು 80 ರಿಂದ 100 ಕೋಟಿ ರೂ. ಗಳಾಗಲಿದೆ ಎಂದು ಅಂದಾಜಿಸಲಾಗಿದೆ.
ನೌಕರರ ಸಂಘದ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರದ ಗೋಶಾಲೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಮುದಿ ಗೋವುಗಳು ಆಶ್ರಯ ಪಡೆದಿವೆ. ಈ ಪುಣ್ಯದ ಕೆಲಸದಲ್ಲಿ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಕೈಜೋಡಿಸಲು ಮುಂದಾಗಿರುವುದು ಅಭಿನಂದನಾರ್ಹ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


