ತಿಪಟೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ನಗರ ಪ್ರದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೂ ಮಿಗಿಲಾದ ಸಾಧನೆ ಮಾಡಬಲ್ಲರು ಎಂಬುದನ್ನು ತಿಪಟೂರಿನ ಟೈಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ರಶ್ಮಿ ಸಾಬೀತುಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 595 ಅಂಕಗಳನ್ನು ಪಡೆಯುವ ಮೂಲಕ ರಶ್ಮಿ ಜಿಲ್ಲೆಗೆ ಟಾಪರ್ ಆಗಿರುವುದಲ್ಲದೆ, ರಾಜ್ಯಕ್ಕೆ 4ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿಯ ಈ ಅಪೂರ್ವ ಸಾಧನೆಯನ್ನು ಮೆಚ್ಚಿ ಸಂಸ್ಥೆಯ ವತಿಯಿಂದ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಟೈಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ಅವರು ಘೋಷಿಸಿದ್ದಾರೆ.
ಕಾಲೇಜಿನಲ್ಲಿ ಪರೀಕ್ಷೆ ಬರೆದ ಒಟ್ಟು 100 ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಸಂಸ್ಥೆಗೆ ಶೇ. 100ರಷ್ಟು ಫಲಿತಾಂಶ ತಂದುಕೊಟ್ಟಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಅತ್ಯುತ್ತಮ ಅಂಕ (Distinction) ಶ್ರೇಣಿಯಲ್ಲಿ ಹಾಗೂ 34 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗುಣಮಟ್ಟದ ಶಿಕ್ಷಣ ಮತ್ತು ಅತ್ಯುತ್ತಮ ಫಲಿತಾಂಶಕ್ಕಾಗಿ ಈ ಹಿಂದೆ ಈ ಸಂಸ್ಥೆಯು ಸರ್ಕಾರದಿಂದ ಪ್ರಶಸ್ತಿಯನ್ನೂ ಪಡೆದಿದೆ.
“ನಮ್ಮ ಕಾಲೇಜಿನಲ್ಲಿ ರಾಜ್ಯದ ನುರಿತ ಮತ್ತು ಪರಿಣಿತ ಉಪನ್ಯಾಸಕರ ತಂಡವಿದ್ದು, ಸುಸಜ್ಜಿತ ಪ್ರಯೋಗಾಲಯ ಸೇರಿದಂತೆ ವಿದ್ಯಾರ್ಥಿಗಳಿಗೆ ಪೂರಕವಾದ ಉತ್ತಮ ಸೌಲಭ್ಯಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮದಿಂದ ಕಾಲೇಜು, ಸಂಸ್ಥೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ.”
— ಬಿ.ಕೆ. ಗಂಗಾಧರ್, ಕಾರ್ಯದರ್ಶಿಗಳು, ಟೈಮ್ ಶಿಕ್ಷಣ ಸಂಸ್ಥೆ.
ಗ್ರಾಮೀಣ ಭಾಗದ ಪ್ರತಿಭೆಗಳು ಸೂಕ್ತ ಮಾರ್ಗದರ್ಶನ ಸಿಕ್ಕರೆ ಜಾಗತಿಕ ಮಟ್ಟದಲ್ಲಿ ಮಿಂಚಬಲ್ಲರು ಎಂಬುದಕ್ಕೆ ಈ ಸಾಧನೆಯೇ ಸಾಕ್ಷಿ ಎಂದು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.
ವರದಿ: ಆನಂದ್, ತಿಪಟೂರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


