ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಗುರುವಾರ ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದು, ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಸರ್ಕಾರ ಸಂಪೂರ್ಣ ವಿವರ ನೀಡಬೇಕಿದೆ.
ನಿನ್ನೆ ವಿಧಾನ ಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ ಜನರು ಏರಿ ವೀಕ್ಷಿಸುತ್ತಿದ್ದರು. ಈ ಸಂದರ್ಭದ ಫೋಟೋ –ವಿಡಿಯೊಗಳು ಸಾಕಷ್ಟು ಹರಿದಾಡಿದ್ದು ಭದ್ರತಾ ಲೋಪವಾಗಿದ್ದು ಸರ್ಕಾರದಿಂದ ಹೈಕೋರ್ಟ್ ವಿವರ ಕೇಳಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW