ತುಮಕೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 132–ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ರ ಸಂಬಂಧ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ಅಕ್ಟೋಬರ್ 5ರ ಶನಿವಾರ ಹಮ್ಮಿಕೊಂಡಿದ್ದ ಮತದಾರರ ಅಭಿಯಾನದಲ್ಲಿ ನಮೂನೆ-6ರಲ್ಲಿ 328 ಸೇರ್ಪಡೆ, ನಮೂನೆ–7ರಲ್ಲಿ 371 ಕೈಬಿಡುವ ಮತ್ತು ನಮೂನೆ–8ರಲ್ಲಿ 410 ತಿದ್ದುಪಡಿ ಅರ್ಜಿ ಸೇರಿ ಒಟ್ಟು 1109 ಅರ್ಜಿಗಳು ಸ್ವೀಕೃತವಾಗಿರುತ್ತವೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ಈ ಅಭಿಯಾನದಲ್ಲಿ ದಿನಾಂಕ 01.01.2025 ಅನ್ನು ಅರ್ಹತಾ ದಿನಾಂಕವಾಗಿಟ್ಟುಕೊಂಡು 18 ವರ್ಷ ತುಂಬಿದ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಈ ವಿಶೇಷ ಅಭಿಯಾನದಲ್ಲಿ 17+ ಮತ್ತು 18 ವರ್ಷ ಪೂರೈಸಿದ ಯುವ ಮತದಾರರು ಹೆಚ್ಚಿನ ಆಸಕ್ತಿ ತೋರಿರುತ್ತಾರೆ.
ಈ ದಿನ ಅರ್ಜಿ ಸಲ್ಲಿಸಲು ಸಾಧ್ಯವಾಗದ ಸಾರ್ವಜನಿಕರು ನಿರಂತರ ಪರಿಷ್ಕರಣೆಯಡಿ VOTER HELP LINE APP ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಸದರಿ ಅವಕಾಶವನ್ನು ಸದುಪಯೊಗಪಡಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296