ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗ್ರೂಪ್ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.
ಇಲಾಖೆಯ ಹೆಸರು: BBMP ಹುದ್ದೆಯ
ಹೆಸರು: ಪೌರಕಾರ್ಮಿಕರು
ಸ್ಥಳ: ಬೆಂಗಳೂರು (ಕರ್ನಾಟಕ)
ಖಾಲಿ ಇರುವ ಹುದ್ದೆಗಳು:
11,307 ಅಧಿಸೂಚನೆ ಹೊರಡಿಸಿದ ದಿನಾಂಕ: 15-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024
ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಶೈಕಣಿಕ ಅರ್ಹತೆ: ಬಿಬಿಎಂಪಿ ನಿಯಮಾವಳಿಯನ್ನು ಹೊಂದಿದೆ.
ಹುದ್ದೆಗಳವಿವರ ಮತ್ತುವಿದ್ಯಾರ್ಹತೆ:
ಸ್ಥಳೀಯ ವೃಂದದ-ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. ಅಭ್ಯರ್ಥಿಗಳು ಭಾರತೀಯ ನಾಗರೀಕರಾಗಿರಬೇಕು. ಬಿಬಿಎಂಪಿ ಯಲ್ಲಿ ನೇರ ಪಾವತಿ / ಕ್ಷೇಮಾಭಿವೃದ್ಧಿ / ದಿನಗೂಲಿ ಆಧಾರದಲ್ಲಿ ಎರಡು ವರ್ಷ ಕಡಿಮೆ ಇಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರುವ ಮತ್ತು ಎರಡು ವರ್ಷಗಳಿಗೂ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆಯುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 17,000 ರೂ. – 28,950 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿಸಲ್ಲಿಸುವ ವಿಧಾನ:
ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್ https://bbmp.gov.in./home ಗೆ ಭೇಡಿ ನೀಡಿ. ಈಗ ತೆರೆದುಕೊಳ್ಳುವ ಹೋಮ್‌ಪೇಜ್‌ನಲ್ಲಿ ಕಂಡು ಬರುವ ಪೌರಕಾರ್ಮಿಕರ ಹುದ್ದೆಗಳ ಅರ್ಜಿ ನಮೂನೆ Click here to View ಆಯ್ಕೆಯನ್ನು ಕ್ಲಿಕ್ ಮಾಡಿ. ಈಗ ಕಂಡು ಬರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ. ಪ್ರಿಂಟ್‌ಔಟ್ ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅದರಲ್ಲಿ ಕೇಳಿರುವ ದಾಖಲೆಗಳನ್ನು ಲಗತ್ತಿಸಿ. ಭರ್ತಿ ಮಾಡಿದ ಅರ್ಜಿಯನ್ನು N.R. Square, Bengaluru -560002, Karnataka ಇಲ್ಲಿಗೆ ಸಲ್ಲಿಸಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA