nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ. ಮೀಸಲು: ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು October 17, 2024

    ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ. ಮೀಸಲು: ಸಚಿವ ಡಾ.ಜಿ.ಪರಮೇಶ್ವರ್

    By adminOctober 17, 2024No Comments3 Mins Read
    valmiki jayanti

    ತುಮಕೂರು: ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾ ನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಾಲ ಭವನ ಸಭಾಂಗಣದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ್ದು, ಜಾತಿ ಗಣತಿ ಆಧಾರದ ಮೇಲೆ ಶೇಕಡಾ 3ರಷ್ಟಿದ್ದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಮತ್ತು ಶಿಕ್ಷಣಕ್ಕೆ ಮಾತ್ರ ಈ ಮೀಸಲಾತಿ ಅನ್ವಯವಾಗಲಿದೆ ಎಂದು ತಿಳಿಸಿದರು.

    ಸ್ವಾವಲಂಬಿ ಬದುಕು ನಡೆಸಲು ಪರಿಶಿಷ್ಟ ವರ್ಗದ ಸುಮಾರು 5,000 ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲಾಗಿದೆಯಲ್ಲದೆ 74,367 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಸಮುದಾಯದ 48,000 ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸಲು ಸುಮಾರು 140 ಕೋಟಿ ರೂ. ಹಣವನ್ನು ವೆಚ್ಚ ಮಾಡಲಾಗಿದೆ. ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ವಿದೇಶಿ ವ್ಯಾಸಂಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಬುದ್ಧ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರಲ್ಲದೆ, ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಮಹರ್ಷಿ ವಾಲ್ಮೀಕಿಯಾದ ರತ್ನಾಕರ:

    ಮಹರ್ಷಿ ವಾಲ್ಮೀಕಿ ಅವರು ಸೂರ್ಯ–ಚಂದ್ರರಿರುವವರೆಗೆ ಮನುಕುಲದ ಜೊತೆ ಇರುತ್ತಾರೆ. ಸಾಮಾನ್ಯ ವ್ಯಕ್ತಿಯಾಗಿದ್ದ ರತ್ನಾಕರ ಪರಿವರ್ತನೆ ಹೊಂದಿ ವಾಲ್ಮೀಕಿಯಾಗಿ 24000 ಶ್ಲೋಕಗಳುಳ್ಳ ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ನಮ್ಮೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ರಾಮಾಯಣ ಕೃತಿ ಮೂಲಕ ಮನುಷ್ಯ ಜೀವನವು ಸತ್ಯ ಮತ್ತು ಧರ್ಮದ ಆಧಾರದ ಮೇಲೆ ನಿಂತಿದೆ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾ ಋಷಿಯಾಗಿದ್ದಾರೆ ಎಂದರಲ್ಲದೆ ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರಲ್ಲಿಯೂ ದುಷ್ಟ ಗುಣಗಳಿರುತ್ತವೆ. ನಮ್ಮಲ್ಲಿರುವ ದುಷ್ಟ ಗುಣಗಳನ್ನು ಸಂಹಾರ ಮಾಡಿ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂಬುದೇ ಮಹಾ ಗ್ರಂಥ ರಾಮಾಯಣದ ಸಾರವೆಂದು ಅಭಿಪ್ರಾಯಪಟ್ಟರು.

    ಸುಮಾರು 5,000 ವರ್ಷಗಳ ಹಿಂದೆ ಹುಟ್ಟಿದ ವರ್ಣಾಶ್ರಮ ಪದ್ಧತಿಯಿಂದ ಶ್ರಮಿಕ ವರ್ಗದವರನ್ನು ಕೆಳಸ್ತರದವರೆಂದು ಗುರುತಿಸಿರುವುದು ನಮ್ಮ ದೌರ್ಭಾಗ್ಯ. ಶ್ರಮಿಕ ವರ್ಗದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಕೆಳಸ್ತರದವರನ್ನು ಮೇಲ್ಪಂಕ್ತಿಗೆ ತರಲು ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಸಮಾನತೆ ಹಕ್ಕನ್ನು ನೀಡಲಾಗಿದೆ. ಆದರೂ ಸಮಾಜದಲ್ಲಿ ಮೇಲ್ವರ್ಗ–ಕೆಳವರ್ಗವೆಂಬ ಬೇಧ–ಭಾವ, ದಲಿತರ ಶೋಷಣೆ ಇನ್ನೂ ನಿಂತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

    ಯಾವುದೇ ವ್ಯಕ್ತಿಯ ವ್ಯಕ್ತಿತ್ವವನ್ನು ಜಾತಿಯಿಂದ ಗುರುತಿಸುವುದು ನಿಂತಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಸಮಾನತೆಯಿಂದ ಬದುಕಬೇಕೆಂಬ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿಯಂತಹ ಮಹನೀಯರ ಜಯಂತಿಯನ್ನು ಆಚರಿಸಲಾಗುತ್ತಿದೆ. ಸಮಾಜದಲ್ಲಿ ಮೇಲು-ಕೀಳು ಭಾವನೆಗಳನ್ನು ತೊರೆದು ಎಲ್ಲರೂ ಸಮಾನರೆಂಬ ಭಾವ ಮೂಡಿದಾಗ ಮಾತ್ರ ಇಂತಹ ಕಾರ್ಯಕ್ರಮಗಳ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಮಹರ್ಷಿ ವಾಲ್ಮೀಕಿಯವರು ರಾಮಾಯಣ ಎಂಬ ಮಹಾ ಗ್ರಂಥವನ್ನು ರಚಿಸುವ ಮೂಲಕ ಆದಿ ಕವಿ ಮತ್ತು ಮಹಾ ಋಷಿ ಎನಿಸಿಕೊಂಡಿದ್ದಾರೆ. ಅವರ ತತ್ವಾದರ್ಶಗಳನ್ನು ಪಾಲಿಸಿಸುವ ಮೂಲಕ ದ್ವನಿ ಇಲ್ಲದವರಿಗೆ ದ್ವನಿಯಾಗಬೇಕು ಎಂದು ತಿಳಿಸಿದರು.

    ನಗರ ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಸಮಾಜದಲ್ಲಿನ ದ್ವೇಷ, ಅಸೂಯೆ, ಕರುಣೆ, ಪ್ರೀತಿಯ ಪಾತ್ರಗಳನ್ನು ರಾಮಾಯಣದಲ್ಲಿ ತೋರಿಸುವ ಮೂಲಕ ಜೀವನದ ಪ್ರತಿ ಹಂತವನ್ನು ಮಹರ್ಷಿ ವಾಲ್ಮೀಕಿಯವರು ವಿಸ್ತೃತವಾಗಿ ತಿಳಿಸಿದ್ದಾರೆ. ಇಂಥಹ ಆದರ್ಶಪ್ರಾಯ ವ್ಯಕ್ತಿಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ ಅವರು ತಿಳಿಸಿದ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮತ್ತು ಜಿಲ್ಲಾ ನಾಯಕ ಮಹಿಳಾ ಸಮಾಜದ ಅಧ್ಯಕ್ಷೆ ಶಾಂತಲಾ ರಾಜಣ್ಣ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮನುಷ್ಯ ಜೀವನದ ಪರಿಕಲ್ಪನೆಯನ್ನು ತಿಳಿಸಿದ್ದು, ಜೀವನ ರೂಪಿಸಿಕೊಳ್ಳಲು ರಾಮಾಯಣ ಒಳ್ಳೆಯ ನಿದರ್ಶನವಾಗಿದೆ. ಹಿಂದುಳಿದ ಸಮುದಾಯಗಳ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಅಧಿಕಾರಿಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ 2023–24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎನ್.ಎಸ್.ಧನುಷ್, ವೈ.ಕಾವ್ಯ, ಕೆ.ಎಸ್. ಚರಣ್‌ರಾಜ್, ಸಾನ್ವಿ, ಬಿಂದು, ಡಿ.ಎ.ಪುನೀತ್, ಓ. ಭಾರ್ಗವಿ, ಸಿ.ಎಲ್. ಚೇತನ, ಭಾನುಪ್ರಕಾಶ್, ಪುಷ್ಪಲತಾ, ಎಂ.ಸೃಷ್ಟಿ, ದೀಪ್ತಿಶ್ರೀ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

    ಹಲಗಲಿ ಬೇಡರ ದಂಗೆಯಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಅವರ ಸ್ಮರಣಾರ್ಥ 2023–24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಪಂಗಡದ ತುಮಕೂರು ಶೈಕ್ಷಣಿಕ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಮೇಲನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಹೆಚ್.ವಿ.ಸ್ಫೂರ್ತಿ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ ತಾಲ್ಲೂಕು ಭುವನಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಡಿ.ಜೆ. ನವ್ಯಶ್ರೀ ಅವರಿಗೆ 1ಲಕ್ಷ ರೂ.ಗಳ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಅಂತರ್ ಜಾತಿ ವಿವಾಹವಾದ ತುಮಕೂರಿನ ಎಂ. ಪುಷ್ಪಲತಾ ಹಾಗೂ ಸಂಜಯ್ ದಂಪತಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

    ಜಗದ ಕವಿ, ಯುಗದ ಕವಿ, ಸರ್ವಧರ್ಮಕ್ಕೆ ಮಹಾನ್ ಗ್ರಂಥ ರಾಮಾಯಣ ರಚಿಸಿದ ವಿಶ್ವಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪಾರ್ಚನೆ ಸಲ್ಲಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು, ಪಾಲಿಕೆ ಮಾಜಿ ಮಹಾಪೌರ ಬಿ.ಜಿ. ಕೃಷ್ಣಪ್ಪ, ಚಂದ್ರಶೇಖರ ಗೌಡ, ವಾಲ್ಮೀಕಿ ವಿದ್ಯಾವರ್ಧಕ ಸಂಘ ಅಧ್ಯಕ್ಷ ಹೆಚ್. ಜಿ. ಪುರುಷೋತ್ತಮ, ಜಿಲ್ಲಾ ನಾಯಕ ಸಮುದಾಯದ ಮುಖಂಡರಾದ ವಿಜಯ ಕುಮಾರ, ಕೆಂಪಹನುಮಯ್ಯ, ಕೃಷ್ಣಮೂರ್ತಿ, ಸಿ.ದಾಸಪ್ಪ, ಮಹದೇವಯ್ಯ, ಶ್ರೀರಾಮಚಂದ್ರ ನಾಯಕ, ಡಿಸಿಸಿ ಬ್ಯಾಂಕಿನ ನಿರ್ದೇಶಕ ಲಕ್ಷ್ಮೀ  ನಾರಾಯಣ, ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿ, ಸಮುದಾಯದ ಮುಖಂಡರು, ವಿವಿಧ ಸಂಘಟನೆ ಪದಾಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

    ಇದಕ್ಕೂ ಮುನ್ನ ಬೆಳ್ಳಿ ರಥದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಿಲ್ಲಾಧಿಕಾರಿ ಶುಭಕಲ್ಯಾಣ್ ಚಾಲನೆ ನೀಡಿದರು. ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಶೋಕ ರಸ್ತೆ, ಟೌನ್‌ಹಾಲ್ ವೃತ್ತ, ಎಂ.ಜಿ. ರಸ್ತೆ ಮೂಲಕ ಬಾಲಭವನ ತಲುಪಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿದೆ.…

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.