ತುಮಕೂರು: ಇಂದು ಶ್ರೀ ಶಿವಕುಮಾರಸ್ವಾಮಿಗಳ 117ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠದಲ್ಲಿ ಶ್ರೀಗಳ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಬೆಳಗ್ಗೆ 5 ಗಂಟೆಯಿಂದಲೇ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ,ಅಭಿಷೇಕ ನೆರವೇರಿಸಲಾಯಿತು.
ಬೆಳಗ್ಗೆ 8 ಗಂಟೆಗೆ ಶ್ರೀಗಳ ಪುತ್ಥಳಿಯನ್ನ ರುದ್ರಾಕ್ಷಿ ಮಂಟಪದಲ್ಲಿಟ್ಟು ವಾದ್ಯಮೇಳ, ಪೂರ್ಣಕುಂಬದೊಂದಿಗೆ ಮೆರವಣಿಗೆ ಮಾಡಲಾಯಿತು. ಹರಗುರುಶರಣರ ನೇತೃತ್ವದಲ್ಲಿ ಸಿದ್ದಗಂಗಾ ಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು.
ಮುಖ್ಯವಾಗಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯನ್ನು ವಿವಿಧ ಹಣ್ಣುಗಳಿಂದ ಅಲಂಕಾರ ಮಾಡಲಾಗಿರುವುದು ವಿಶೇಷವಾಗಿದೆ. ಅದರಲ್ಲೂ ಶಶಿಕುಮಾರ್ ಸ್ವಾಮೀಜಿ ನಿತ್ಯ ಬಳಸುತ್ತಿದ್ದಂತಹ ಪರಂಗಿ ಹಣ್ಣು ಅಲಂಕಾರದಲ್ಲಿ ಬಳಸಲಾಗಿರುವುದು ಗಮನಾರ್ಹ ಅಂಶವಾಗಿದೆ.

ಹಲಸಿನ ಹಣ್ಣು, ಕಿತ್ತಳೆ ಹಣ್ಣು, ಮೂಸಂಬಿ, ಪಪ್ಪಾಯ ಸೇರಿದಂತೆ ಹತ್ತಕ್ಕೂ ಹೆಚ್ಚು ಹಣ್ಣುಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಭಕ್ತರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


