ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ ಇಂದು, ಸಿದ್ದಗಂಗಾ ಮಠಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಭೇಟಿ ನೀಡಿ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು.
ಇದೇ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರುದ್ರೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು.
ಗದ್ದುಗೆ ದರ್ಶನ ಪಡೆದ ಡಾ ಮಂಜುನಾಥ್ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಕೂಡ ಅವರೊಂದಿಗೆ ಜೊತೆಗೂಡಿ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು.
ಅಲ್ಲದೆ, ಇಬ್ಬರು ಬಿಜೆಪಿ ಅಭ್ಯರ್ಥಿಗಳು ಗದ್ದುಗೆಗೆ ವಿಶೇಷ ಪೂಜೆಯನ್ನು ಕೂಡ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.
ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296