ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ 13 ಜನ ಸಾವಿಗೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಇವರು ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಭದ್ರಾವತಿಗೆ ಮರಳಿ ಹೋಗುತ್ತಿರುವ ಸಂದರ್ಭದಲ್ಲಿ ತಡರಾತ್ರಿ 3.30ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಟಿಟಿ ವಾಹನ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರ ತೆಗೆದು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಟಿ ವಾಹನದಲ್ಲಿ 17 ಜನರು ಪ್ರಯಾಣ ಮಾಡುತ್ತಿದ್ದು, ಇದರಲ್ಲಿ ಒಟ್ಟು 13 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


