ಮುಂಬೈ : ಮಹಾರಾಷ್ಟ್ರದಲ್ಲಿ ನಡೆದ 13 ವರ್ಷಗಳ ಹಿಂದಿನ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಸೇರಿ ಎಲ್ಲ ನಾಲ್ವರು ಆರೋಪಿಗಳನ್ನು ಮುಂಬೈ ವಿಶೇಷ ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನಾಲ್ವರನ್ನೂ ಆರೋಪ ಮುಕ್ತ ಮಾಡಲಾಗಿದೆ.
2009ರ ಜುಲೈ 29ರಂದು ಭಿಂಡಿ ಬಜಾರ್‌ನಲ್ಲಿ ಮತ್ತೊಬ್ಬ ಭೂಗತ ಪಾತಕಿ ಛೋಟಾ ಶಕೀಲ್ ಗ್ಯಾಂಗ್‌ನ ಆಸಿಫ್ ದಾಧಿ ಅಲಿಯಾಸ್ ಛೋಟೆ ಮಿಯಾನ್ ಮತ್ತು ಶಕೀಲ್ ಮೋದಕ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಛೋಟಾ ರಾಜನ್ ಈ ಜೋಡಿ ಕೊಲೆಗೆ ಸಂಚು ರೂಪಿಸಿದ್ದ ಆರೋಪ ಹೊತ್ತಿದ್ದರು. ಮೊಹಮ್ಮದ್ ಅಲಿ ಜಾನ್, ಪ್ರಣಯ್ ರಾಣೆ ಮತ್ತು ಉಮ್ಮದ್ ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದರು.
ಆದರೆ, ಅಪರಾಧವನ್ನು ಸಾಬೀತುಪಡಿಸುವಲ್ಲಿ ಸಾಧ್ಯವಾಗಿಲ್ಲ. ಸಾಕ್ಷ್ಯಾಧಾರಗಳ ಕೊರತೆ, ಗುರುತಿನ ಪರೇಡ್ ವಿಫಲತೆ, ಶಸ್ತ್ರಾಸ್ತ್ರಗಳು ಮತ್ತು ಗುಂಡುಗಳು ಹೊಂದಿಕೆಯಾಗದ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಮುಂಬೈ ಸೆಷನ್ಸ್ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಎಂ.ಪಾಟೀಲ್ ತೀರ್ಪು ಪ್ರಕಟಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy