ಬೇಲೂರು: ಮರವೊಂದಕ್ಕೆ ಸಿಡಿಲು ಬಡಿದ ಪರಿಣಾಮ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 13 ಮಹಿಳೆಯರು ಸಿಡಿಲಿನ ಆಘಾತಕ್ಕೊಳಗಾದ ಘಟನೆ ಬೇಲೂರು ತಾಲ್ಲೂಕು ಅರೇಹಳ್ಳಿ ಹೋಬಳಿ ಕೋರಲುಗದ್ದೆ ಗ್ರಾಮದಲ್ಲಿ ನಡೆದಿದೆ.
ಒಟ್ಟು 13 ಜನರು ಸಿಡಿಲಿನ ಆಘಾತಕ್ಕೊಳಗಾಗಿದ್ದು, ಈ ಪೈಕಿ ಲತಾ W/O ಪ್ರೇಮ್ ಕುಮಾರ್ ಎಂಬವರು ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಿಳೆಯರು ಸಮೀಪದ ಜಮೀನನಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಏಕಾಏಕಿ ಮರದ ಕೊಂಬೆಗೆ ಸಿಡಿಲು ಬಡಿದಿದೆ. ಪರಿಣಾಮವಾಗಿ ಜಮೀನಿನಲ್ಲಿದ್ದವರು ಸಿಡಿಲಿನ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದು ಭಾನುವಾರ ರಾತ್ರಿಯೇ ತಹಶೀಲ್ದಾರ್ ಮಮತ.ಎಂ, PSI ಸರ್ದಾರ್ ಪಾಷಾರವರೊಂದಿಗೆ ಆಸ್ಪತ್ರೆಗೆ ಧಾವಿಸಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296