ತಿಪಟೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತು ಶಾಲೆ ಆರ್ಯ ಬಾಲಿಕಾ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 133ನೇ ಜನ್ಮ ದಿನವನ್ನು ಆಚರಿಸಲಾಯಿತು.
ಕ.ಸಾ.ಪ. ತಾಲೂಕು ಅಧ್ಯಕ್ಷ ಬಸವರಾಜಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರ ಶ್ರೇಷ್ಠ ಕೊಡುಗೆ ‘ಸಂವಿಧಾನ’ ದಿಂದಾಗಿಯೇ ಸಮಾಜದ ಎಲ್ಲ ವರ್ಗಗಳ ಜನರು ಸಮಾನ ಅವಕಾಶ, ಹಕ್ಕುಗಳನ್ನು ಪಡೆಯುವಂತಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಹೆಚ್.ಎಸ್.ಮಂಜಪ್ಪ ಕಾರ್ಯದರ್ಶಿ ತಾಲೂಕು ಕ.ಸಾ.ಪ. ಇವರು ಅಂಬೇಡ್ಕರ್ ರವರ ಬಾಲ್ಯ, ವಿದ್ಯಾಭ್ಯಾಸ, ಹೋರಾಟದ ಬದುಕಿನ ಬಗ್ಗೆ ತಿಳಿಸಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಉಮಾದೇವಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಮವಸ್ತ್ರ ವಿತರಿಸಲಾಯಿತು. ಮುಮ್ತಾಜ್ ಮುಖ್ಯ ಶಿಕ್ಷಕರು ಸ್ವಾಗತಿಸಿ, ವಂದಿಸಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy