ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 25 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ 139 ಚಾಲಕರಿಗೆ ಪದೋನ್ನತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, 25 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿದ 139 ಚಾಲಕರು ಹಿರಿಯ ಚಾಲಕ ಹುದ್ದೆಗೆ ಪದೋನ್ನತಿ ಹೊಂದಿದ್ದು ಸಾಂಕೇತಿಕವಾಗಿ 13 ಚಾಲಕರಿಗೆ ಪದೋನ್ನತಿ ಆದೇಶವನ್ನು ವಿತರಿಸಲಾಯಿತು ಎಂದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 1122 ಅರ್ಹ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕವನ್ನು ವಿತರಿಸಲಾಯಿತು. ಬೆಂಗಳೂರಿನಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ 1122 ಅರ್ಹ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಬಿಎಂಟಿಸಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


