ತುಮಕೂರು: ಜಿಲ್ಲೆಯಲ್ಲಿ 14 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಅದರಲ್ಲಿ ಗುಬ್ಬಿ ತಾಲೂಕಿನಲ್ಲಿಯೇ 13 ಪ್ರಕರಣಗಳು ಪತ್ತೆಯಾಗಿವೆ, ಚಿರಾ ತಾಲೂಕಿನಲ್ಲಿ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ ತಿಳಿಸಿದ್ದಾರೆ.
ಕೊರೋನ ಸೋಂಕು ತಗಲಿರುವ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯವನ್ನು ಈಗಾಗಲೇ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸೋಂಕು ತಗಲಿರುವ ವ್ಯಕ್ತಿಗಳಿಗೆ ಪೂರಕವಾಗಿ ವೈದ್ಯರು ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಯಾವ ಸೋಂಕಿತರು ಸೀರಿಯಸ್ ಪ್ರಕರಣಗಳು ಆಗಿಲ್ಲ ಎಂದು ಹೇಳಿದರು.
ತುರುವೇಕೆರೆ ಮೂಲದ 42 ವರ್ಷದ ವ್ಯಕ್ತಿಯು ಕೋವಿಡ್ ಸೋಂಕಿನಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW