ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕೇಂದ್ರ ಗೃಹಸಚಿವ ಅಮಿತ್ ಶಾ ಮಾರ್ಗದರ್ಶನದಂತೆ ರಣತಂತ್ರ ರೂಪಿಸಲಾಗಿದೆ. 140 ಸ್ಥಾನ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಬಜೆಟ್ ಅಧಿವೇಶನ ನಂತರ ಮತ್ತೆ ರಾಜ್ಯ ಪ್ರವಾಸ ಕೈಗೊಳ್ಳುತ್ತೇವೆ. ಮಂಡ್ಯದಲ್ಲಿ ಅಮಿತ್ ಶಾ ಪ್ರವಾಸದ ಬಳಿಕ ಬಿಜೆಪಿ ಅಲೆ ಹೆಚ್ಚಾಗಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.
ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಸುಮಲತಾ ಅಂಬರೀಶ್ ಬೆಂಬಲಿಗರು ಬಿಜೆಪಿ ಸೇರುತ್ತಿದ್ದಾರೆ. ಸುಮಲತಾ ಅಂಬರೀಶ್ ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


