ಪ್ರಯಾಗ್ರಾಜ್: ಮಹಾಕುಂಭ ಮೇಳದಲ್ಲಿ ಅಮೃತ ಸ್ನಾನದ ವೇಳೆ ನಡೆದ ಕಾಲ್ತುಳಿತದಲ್ಲಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡಿಂಗ್ ದಾಟಲು ಕೆಲವರು ಯತ್ನಿಸಿದ್ದು, ಈ ವೇಳೆ ಕೆಲ ಭಕ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4