ಮಂಡ್ಯ : ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಪ್ರತಿಭಟನೆ 15ನೇ ದಿನಕ್ಕೆ ಕಾಲಿಟ್ಟಿದೆ.
ಜಿಲ್ಲಾ ಅತಿಥಿ ಉಪನ್ಯಾಸಕರ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕಾಂಗ್ರೆಸ್ ಮುಖಂಡ ಮಧು ಜಿ. ಮಾದೇಗೌಡ ಬೆಂಬಲ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಉಪನ್ಯಾಸಕರು ಪ್ರತಿಭಟನೆ ನಡೆಸ್ತಿದ್ದಾರೆ. ಅವರ ಬೇಡಿಕೆಗಳನ್ನು ಪೂರೈಸಲು ಮುಂದಾಗಬೇಕು. ಸರ್ಕಾರ ಇನ್ನು ಕೂಡ ಕಣ್ಮುಚ್ಚಿಕುಳಿತಿದೆ.ಇದರಿಂದ ವಿದ್ಯಾರ್ಥಿಗಳಿಗೂ ತೊಂದರೆಯಾಗುತ್ತದೆ. ಸರ್ಕಾರ ಕೂಡಲೇ ಎಚ್ಚೆತ್ತು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು.
ಅತಿಥಿ ಉಪನ್ಯಾಸಕರ ಜೊತೆ ನಾವು ಇರ್ತೇವೆ, ಸರ್ಕಾರ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡ ಮಧು ಒತ್ತಾಯಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy