ಶಿವಮೊಗ್ಗ : ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂಗೊಳಿಸಿದ ಆರೋಪದ ಮೇಲೆ ಹತ್ಯೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕಲ್ಲಪ್ಪನಕೇರಿಯಿಂದ ಅಜಾನ್ ನಗರಕ್ಕೆ ಬೈಕ್‍ನಲ್ಲಿ ಬಂದ 10ರಿಂದ 15 ಜನರ ಗುಂಪು ಸಯ್ಯದ್ ಫರ್ವೀಜ್ ಎಂಬವರಿಗೆ ಸೇರಿದ್ದ ಇನ್ನೋವಾ ಕಾರನ್ನು ಜಖಂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಅಷ್ಟೇ ಅಲ್ಲದೇ ಆ ಗುಂಪು ಜೈ ಶ್ರೀರಾಮ್ ಎಂದು ಕೂಗುತ್ತಾ ಕೇಸರಿ ಬಾವುಟ ಹಿಡಿದುಕೊಂಡಿತ್ತು ಎಂದು ಸಯ್ಯದ್ ಫರ್ವೀಜ್ ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


