ಶಿಕಾರಿಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿರುವ ಮತಗಟ್ಟೆ ಕೇಂದ್ರದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಿ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಈ ಕ್ಷೇತ್ರದಲ್ಲಿ 9ಶಾಸಕರು ಹಾಗೂ ಇಬ್ಬರು ಸಂಸದರು ನಮ್ಮ ಪಕ್ಷದವರೇ ಇದ್ದಾರೆ. ಶಾಸಕರು ಹಾಗೂ ಮಂತ್ರಿಗಳು ಉತ್ಸಾಹದಿಂದ ಚುನಾವಣೆ ಕೆಲಸ ಮಾಡುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಡಿ.ಎಸ್. ಅರುಣ್ 400 ಮತಗಳ ಅಂತರದಿಂದ ಮೊದಲ ಸುತ್ತಿನಲ್ಲಿಯೇ ಗೆಲುವು ಸಾಧಿಸುತ್ತಾರೆ. ವಿಧಾನ ಪರಿಷತ್ತಿನಲ್ಲಿ ನಮಗೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದರು.
ವೈಯಕ್ತಿಕ ಟೀಕೆ ನಡೆಸುತ್ತಿರುವ ವಿರೋಧ ಪಕ್ಷ ಮುಖಂಡರಿಗೆ ಈ ಚುನಾವಣೆ ಫಲಿತಾಂಶ ಉತ್ತರ ಸಿಗುತ್ತದೆ. ಸ್ಥಳೀಯ ಸಂಸ್ಥೆಗಳ ಈ ಚುನಾವಣೆಯಲ್ಲಿ ಜನರು 15ಕ್ಷೇತ್ರಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಿ ಕೊಟ್ಟರೇ ಅದರ ಅರ್ಥ ಗ್ರಾಮೀಣಾ ಪ್ರದೇಶದಲ್ಲಿ ಕಾಂಗ್ರೆಸ್ ದೂಳಿಪಟವಾಗಿ ಬಿಜೆಪಿ ಪರ ಅಲೆ ಇದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700