ಹಾವೇರಿ : ಈ ವರ್ಷವೇ 15 ಸಾವಿರ ಶಿಕ್ಷಕರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಸವಣೂರು ತಾಲೂಕಿನ ತೆವರಮೆಳ್ಳಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ , ಈಗಾಗಲೇ 15,000 ಶಿಕ್ಷರನ್ನು ನೇಮಕ ಮಾಡಲಾಗಿದೆ. ಈ ವರ್ಷ ಇನ್ನೂ 15,000 ಶಿಕ್ಷಕರ ನೇಮಕ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಈ ವರ್ಷದಲ್ಲಿ 8,100 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಇಷ್ಟು ಪ್ರಮಾಣದ ಶಾಲಾ ಕೊಠಡಿಗಳ ನಿರ್ಮಾಣ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


