ಬೆಂಗಳೂರು: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಪ್ಲಸ್ ಶಾಸಕ ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ. ಮೂರು ತಂಡಗಳಲ್ಲಿ ಪಕ್ಷದ ಸಂಘಟನೆಗಾಗಿ ಪ್ರವಾಸವೂ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಬೆಂಗಳೂರಿನ ಜಯನಗರದ ದಿ ಪ್ರೆಸಿಡೆಂಟ್ ಹೋಟೆಲ್‍ನ ಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸದ ವೇಳೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯದಿಂದ ಬೂತ್ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ– ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ, ಪೇಜ್ ಕಮಿಟಿ ಹೆಚ್ಚು ಸದೃಢಗೊಳಿಸಲಾಗುತ್ತಿದೆ ಎಂದು ವಿವರಿಸಿದರು. ಪ್ರತಿ ಪೇಜ್‍ಗೆ ಆರು ಜನರ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.
ಒಂದು ಮಂಡಲದಿಂದ ಇನ್ನೊಂದು ಮಂಡಲಕ್ಕೆ ತೆರಳಿ ಪೇಜ್ ಕಮಿಟಿ ಕಾರ್ಯದ ಪರಿಶೀಲನೆ ನಡೆದಿದೆ. ಬೂತ್ ಅಧ್ಯಕ್ಷರ ನಾಮಫಲಕ ಜೋಡಣೆ ದೇಶದಲ್ಲೇ ಮೊದಲ ಬಾರಿಗೆ ನಡೆದಿದ್ದು, ಶೇ.90ರಷ್ಟು ಕಾರ್ಯ ಮುಕ್ತಾಯವಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


