ಛತ್ತೀಸ್ ಗಢ: 16 ವರ್ಷದ ಬಾಲಕಿಯನ್ನು ಅಪಹರಿಸಿ 2 ದಿನಗಳ ಕಾಲ ನಿರಂತರ ಅತ್ಯಾಚಾರವೆಸೆಗಿದ ಘಟನೆ ಛತ್ತೀಸ್ ಗಢದ ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ನಡೆದಿದೆ.
ಡಿ.21ರಂದು ಸಂಜೆ ಆರೋಪಿ ಹಾಗೂ ಆತನ ತಾಯಿ ಸೇರಿಕೊಂಡು ಬಾಲಕಿಯನ್ನು ಮನೆಗೆ ಲಿಫ್ಟ್ ಕೊಡುವ ನೆಪದಲ್ಲಿ ಅಪಹರಿಸಿದ ಆರೋಪಿಗಳು ಬೈಕ್‌ನಲ್ಲಿ ತನ್ನ ಮನೆಗೆ ಕರೆದೊಯ್ದು ಎರಡು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಂತರ ಆರೋಪಿ ಮತ್ತು ಆತನ ತಾಯಿ ಬಾಲಕಿಯ ಮೇಲೆ ಹಲ್ಲೆ ನಡೆಸಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೊಳದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಷಯ ತಿಳಿದ ಬಾಲಕಿಯ ತಂದೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಂತ್ರಸ್ತೆಯ ತಂದೆಯು ಆರೋಪಿ ಹಾಗೂ ಆತನ ತಾಯಿ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಆರೋಪಿಯನ್ನು ಡಿಸೆಂಬರ್ 29 ರಂದು ಬಂಧಿಸಲಾಗಿದ್ದು, ಆತನ ತಾಯಿಯನ್ನು ಪತ್ತೆಹಚ್ಚಿ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.


