ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸಿ ಜಾಮೀನು ಮೇಲೆ ಹೊರಬಂದು ಪುನಃ ಕಳ್ಳತನ ಎಸಗುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ತಾಲ್ಲೂಕಿನ ಕೋಳಿವಾಡ ನಿವಾಸಿ ಅಚ್ಯುತ್ ಕುಮಾರ್, ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ.
ಮಾರ್ಚ್‌ನಲ್ಲಿ ಈತನನ್ನು ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು. ಕೃತ್ಯದ ಬಳಿಕ ಆರೋಪಿ ಮೈಸೂರಿಗೆ ಹೋಗಿ ತಲೆಮರೆಸಿಕೊಂಡಿದ್ದ. ಮಹಿಳೆ ನೀಡಿದ್ದ ದೂರು ಆಧರಿಸಿ ತನಿಖೆ ಕೈಗೊಂಡು, ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಈತನಿಂದ 9.40 ಲಕ್ಷ ಮೌಲ್ಯದ 4 ಚಿನ್ನದ ಸರ ಹಾಗೂ ಪಲ್ಸರ್ ಬೈಕ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


