nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026
    Facebook Twitter Instagram
    ಟ್ರೆಂಡಿಂಗ್
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    • ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಪಾಡಿದ್ದೇವೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ
    • ಶಾಲೆಯ ಆವರಣದಲ್ಲೇ ಸಂತೆ:  ಹೊಳವನಹಳ್ಳಿ ಹಿಂದೂಸ್ತಾನ್ ಶಾಲೆಯಲ್ಲಿ ಗಮನ ಸೆಳೆದ ಸಂತೆ ಮೇಳ
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿಗೆ ಸಿಡಿದೆದ್ದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು: ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆ.7ರಂದು ತುಮಕೂರು ವಿವಿ 17ನೇ ವಾರ್ಷಿಕ ಘಟಿಕೋತ್ಸವ: 3 ಜನರಿಗೆ ಗೌರವ ಡಾಕ್ಟರೇಟ್, 36 ಅಭ್ಯರ್ಥಿಗಳಿಗೆ ಪಿ.ಎಚ್.ಡಿ ಪ್ರದಾನ
    ತುಮಕೂರು August 5, 2024

    ಆ.7ರಂದು ತುಮಕೂರು ವಿವಿ 17ನೇ ವಾರ್ಷಿಕ ಘಟಿಕೋತ್ಸವ: 3 ಜನರಿಗೆ ಗೌರವ ಡಾಕ್ಟರೇಟ್, 36 ಅಭ್ಯರ್ಥಿಗಳಿಗೆ ಪಿ.ಎಚ್.ಡಿ ಪ್ರದಾನ

    By adminAugust 5, 2024No Comments2 Mins Read
    thumakur

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ೧೭ನೇ ವಾರ್ಷಿಕ ಘಟಿಕೋತ್ಸವವು ಆಗಸ್ಟ್ 7ರಂದು ಕುಲಪತಿಗಳ ಕಚೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.

    ವಿಶ್ವ ವಿದ್ಯಾನಿಲಯದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿಂದು ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ಕ್ರೀಡೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಜಲಕ್ರೀಡಾ ಸಾಹಸಿಗ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಜಿಲ್ಲೆಯ ಸುಗ್ಗನಪಾಳ್ಯದ ಎಸ್.ಸಿ. ನಾಗಾನಂದಸ್ವಾಮಿ, ಸಮಾಜ ಸೇವಾ ವಿಭಾಗದಲ್ಲಿ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್, ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವಾ ವಿಭಾಗದಲ್ಲಿ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀಶ್ರೀಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸೇರಿ ೩ ಮಂದಿಗೆ ಗೌರವ ಡಾಕ್ಟರೇಟ್ ಹಾಗೂ ೩೬ ಅಭ್ಯರ್ಥಿಗಳಿಗೆ ಪಿಎಚ್.ಡಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.


    Provided by
    Provided by

    ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಮಕುಲಾಧಿಪತಿ ಡಾ: ಎಂ.ಸಿ. ಸುಧಾಕರ್ ಉಪಸ್ಥಿತರಿರುತ್ತಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಶ್ರಾಂತ ಅಧ್ಯಕ್ಷ ಡಾ: ಎ.ಎಸ್. ಕಿರಣ್ ಕುಮಾರ್ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.

    ಈ ಬಾರಿ ಘಟಿಕೋತ್ಸವದಲ್ಲಿ ೩ ಅಭ್ಯರ್ಥಿಗಳಿಗೆ ಡಿ.ಲಿಟ್ ಪದವಿ, ೧೭೫೮ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಹಾಗೂ ೧೦,೨೩೦ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಸೇರಿದಂತೆ ಒಟ್ಟು ೧೧೯೮೮ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.

    ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ‍್ಯಾಂಕ್, ಬಿಎ/ಬಿಎಸ್‌ಡಬ್ಲೂö್ಯ/ಬಿಎಸ್ಸಿ/ಬಿಕಾಂ/ಬಿಬಿಎA/ಬಿಇಡಿ(ಸೆಮಿಸ್ಟರ್ ಪದ್ಧತಿ)ಪದವಿಗಳಿಗೆ ತಲಾ ೧೦, ಬಿಎಫ್ಎ/ಬಿವಿಎ/ಬಿಎ ಇಂಟಿಗ್ರೇಟೆಡ್ ಕನ್ನಡ ಪಂಡಿತ್‌ಗೆ ತಲಾ ೧ ರ‍್ಯಾಂಕ್ ಘೋಷಿಸಲಾಗಿದ್ದು, ಒಟ್ಟು ೭೪ ವಿದ್ಯಾರ್ಥಿಗಳಿಗೆ ೯೮ ಚಿನ್ನದ ಪದಕ ಹಾಗೂ ೮ ನಗದು ಬಹುಮಾನಗಳನ್ನು ಘಟಿಕೋತ್ಸವದಲ್ಲಿ ಪ್ರದಾನ ಮಾಡಲಿದೆ ಎಂದು ತಿಳಿಸಿದರು.

    ವಿಶ್ವವಿದ್ಯಾನಿಲಯದ ಶೈಕ್ಷಣಿಕ ಪ್ರಗತಿ ಮಾಹಿತಿ ಹಂಚಿಕೊAಡ ಅವರು, ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿ ಸ್ನೇಹಿ ಪರೀಕ್ಷೆಗಳನ್ನು ನಡೆಸುತ್ತಿದೆ. ನಿರ್ಧಿಷ್ಟ ಅವಧಿಯೊಳಗೆ ಎಲ್ಲಾ ವಿಶ್ವವಿದ್ಯಾನಿಲಯಗಳು ಶೈಕ್ಷಣಿಕ ವರ್ಷವನ್ನು ಮುಗಿಸುವಂತೆ ರಾಜ್ಯ ಸರ್ಕಾರದಿಂದ ನಿರ್ದೇಶನ ನೀಡಿದ್ದು, ಅದರಂತೆ ಸಕಾಲದಲ್ಲಿ ಪಠ್ಯಗಳನ್ನು ಪೂರ್ಣಗೊಳಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಉನ್ನತ ವ್ಯಾಸಂಗ ಹಾಗೂ ನೇಮಕಾತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರೀಕ್ಷೆ ನಡೆದ ನಂತರ ಶೀಘ್ರವಾಗಿ ಫಲಿತಾಂಶ ನೀಡುವ ಉದ್ದೇಶದಿಂದ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ರಜೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ ಅವರು, ಸ್ಥಳದ ಅಭಾವವಿರುವುದರಿಂದ ಹೊಸ ಕೋರ್ಸ್ಗಳನ್ನು ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ ಎಂದರು.

    ಮಾಧ್ಯಮ ಗೋಷ್ಠಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ(ಆಡಳಿತ)ರಾದ ನಾಹಿದಾ ಜಮ್ ಜಮ್, ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ.ಕೆ.ಪ್ರಸನ್ನಕುಮಾರ್, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥರಾದ ಸಿಬಂತಿ ಪದ್ಮನಾಭ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಫೆಬ್ರವರಿ 20 ರಿಂದ ಆರು ದಿನಗಳ ಕಾಲ ತೋರೆಮನೆಯಲ್ಲಿ ಅಂತರಗಟ್ಟೆ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ

    February 12, 2026

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳಿಸುತ್ತಿದ್ದಾರೆ ಎಂದು ಬಿಜೆಪಿ…

    ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

    February 12, 2026

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ

    February 12, 2026

    ಶಾಸಕ ಭೈರತಿ ಬಸವರಾಜ್‌ ಗೆ ಸುಪ್ರೀಂ ಕೋರ್ಟ್‌ನಲ್ಲೂ ಬಿಗ್ ಶಾಕ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ

    February 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.