ತಿಪಟೂರು: ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿ ಕೆರೆ ಸುಮಾರು 18 ವರ್ಷಗಳ ನಂತರ ತುಂಬಿ ಕೋಡಿ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು, ಕೆರೆಗೆ ಗಂಗಾಪೂಜೆಯನ್ನು ಸಲ್ಲಿಸಿದರು.
ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕಿನ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಕೆ.ಆರ್. ದೇವರಾಜ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಕುಮಾರಯ್ಯ ರವೀಶ್ ರವರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ನೂತನ ಹಾಲು ಉತ್ಪಾದಕರ ಸಂಘ ಕರಡಿ ಇದರ ಉಪಾಧ್ಯಕ್ಷರಾದ ರಂಗಸ್ವಾಮಿ ಮತ್ತು ಸುತ್ತಮುತ್ತಲಿನ ರೈತರುಗಳು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.
ವರದಿ: ಆನಂದ್ ತಿಪಟೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700