ಬೆಂಗಳೂರು : ಹೂಡಿಕೆ ಹೆಸರಿನಲ್ಲಿ ಜನರಿಂದ 1854 ಕೋಟಿ ಕಟ್ಟಿಸಿಕೊಂಡು ವಂಚಿಸಿದ್ದ ಬೃಹತ್ ಜಾಲ ಭೇದಿಸಿರುವ ಸಿಸಿಬಿ ಪೊಲೀಸರು, ಜಾಲದ ಪ್ರಮುಖ ರೂವಾರಿ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಮನೋಜ್ ಅಲಿಯಾಸ್ ಜಾಕ್, ಫಣೀಂದ್ರ, ಚಕ್ರಧರ್ ಅಲಿಯಾಸ್ ಚಕ್ರಿ, ಶ್ರೀನಿವಾಸ್, ಸೋಮಶೇಖರ್ ಹಾಗೂ ವಸಂತ್ ಕುಮಾರ್ ಬಂಧಿತರು. ಇವರೆಲ್ಲರೂ ತಂಡ ಕಟ್ಟಿಕೊಂಡು ಹಲವು ವರ್ಷಗಳಿಂದ ಸೈಬರ್ ಅಪರಾಧ ಎಸಗುತ್ತಿದ್ದರು ಎಂದು ಕಮಿಷನರ್ ಬಿ. ದಯಾನಂದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


