nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 18ನೇ ದಿನಕ್ಕೆ ಕಾಲಿಟ್ಟ ಭೂಮಿ, ವಸತಿ ರಹಿತರ ಅಹೋರಾತ್ರಿ ಧರಣಿ
    ತುಮಕೂರು April 7, 2022

    18ನೇ ದಿನಕ್ಕೆ ಕಾಲಿಟ್ಟ ಭೂಮಿ, ವಸತಿ ರಹಿತರ ಅಹೋರಾತ್ರಿ ಧರಣಿ

    By adminApril 7, 2022No Comments2 Mins Read
    nagabhushan

    Provided by
    Provided by

    ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು  ಭೂಮಿ ವಸತಿ ರಹಿತರು ನಡೆಸುತ್ತಿರುವ ಅಹೋರಾತ್ರಿ ಧರಣಿ 18ನೇ ದಿನಕ್ಕೆ ಕಾಲಿಟ್ಟಿದೆ.

    ಸಾಮಾಜಿಕ ಹೋರಾಟಗಾರ ನಾಗಭೂಷಣ್  ಧರಣಿ ನಿರತರನ್ನುದ್ದೇಶಿಸಿ ಮಾತನಾಡಿ, ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಅನಿರ್ದಿಷ್ಟ ಕಾಲ ಅಹೋರಾತ್ರಿ ಧರಣಿಯನ್ನು 18ನೇ ದಿನ ಮುಂದುವರಿಸುತ್ತಿದ್ದೇವೆ. ನಾವು ಕಳೆದ ತಿಂಗಳು ಮಾರ್ಚ್ 21ನೇ ತಾರೀಕಿನಲ್ಲಿ ನಮ್ಮ ಧರಣಿಯನ್ನು ಪ್ರಾರಂಭ ಮಾಡಿದ್ದೇವೆ. ಮಾರ್ಚ್ 25ನೇ ತಾರೀಕು ಜಿಲ್ಲಾ ಪಂಚಾಯಿತಿ ಸಿಇಓ ರವರು ಮತ್ತು ಜಿಲ್ಲಾಧಿಕಾರಿಗಳು ಈ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆಗಳನ್ನು ಮತ್ತೊಮ್ಮೆ ಕೇಳಿ ತುರ್ತಾಗಿ ಹರಿಸಿ ಕೊಡುತ್ತೇವೆ ಎಂದು ಹೇಳಿ ಹೋದರು. ಆದರೆ ಇಲ್ಲಿಯವರೆಗೂ ಅವರು ಯಾವ ಕ್ರಮಕೈಗೊಂಡಿದ್ದಾರೆ ಎನ್ನುವ ಮಾಹಿತಿಯೇ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಯುಗಾದಿ ಹಬ್ಬವನ್ನು ಕೂಡ ನಾವು ಇಲ್ಲಿ ಆಚರಿಸಿದ್ದೇವೆ. ನೆನ್ನೆ 17 ನೇ ದಿನಕ್ಕೆ ವಿಧಾನಪರಿಷತ್ ಸದಸ್ಯರಾದ ಆರ್.ರಾಜೇಂದ್ರ ರವರು ಭೇಟಿಕೊಟ್ಟು, ನಿಮ್ಮ ಬೆಂಬಲವಾಗಿ ನಿಮ್ಮ ಸಮಸ್ಯೆಗಳಿಗೆ ನಾನಿರುತ್ತೇನೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡುತ್ತೇನೆ ಎಂದು ಅವರು ಕೂಡ ಭರವಸೆ ಕೊಟ್ಟಿದ್ದಾರೆ. ಕಳೆದ ಒಂದು ನಾಲ್ಕೈದು ದಿನಗಳ ಹಿಂದೆ ಒಂದು ಬಾರಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಹುಚ್ಚಯ್ಯ ನವರು ಕೂಡ ಬಂದು ನಮಗೆ ಬೆಂಬಲವನ್ನು ಕೊಟ್ಟಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ, ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಎಸಿ ಹಾಗೂ ತಹಸೀಲ್ದಾರ್ ಅವರಿಗೆ ಈಗಾಗಲೇ ಅನೇಕ ಬಾರಿ ನಿರ್ದೇಶನವನ್ನು ಕೊಟ್ಟಿದ್ದಾರೆ. ಆದರೆ ಸ್ಥಳೀಯ ಅಧಿಕಾರಿಗಳು ಇಲ್ಲಿ ನಿರ್ಲಕ್ಷ್ಯ ಮಾಡಿ ಕೊಂಡು ಕಾಲ ವಿಳಂಬ ಮಾಡುತ್ತಿದ್ದಾರೆ. ನಮ್ಮ ಧರಣಿ ಸ್ಥಳದಲ್ಲೇ ನಮ್ಮ ಸಮಸ್ಯೆಯನ್ನು ಬಗೆಹರಿಸುವವರೆಗೂ ನಾವು ಇಲ್ಲಿಯೇ ಧರಣಿಮುಂದುವರೆಸುತ್ತೇವೆ. ಒಂದು ತಿಂಗಳಲ್ಲಿ, ಎರಡು ತಿಂಗಳಲ್ಲಿ ಸ್ಥಳದಲ್ಲೇ ನೀವು ಸಮಸ್ಯೆ ಬಗೆಹರಿಸಿ ಕೊಡಿ ಹಾಗೂ ಚಿಕ್ಕನಾಯಕನಹಳ್ಳಿ ತಹಸಿಲ್ದಾರ್ ರನ್ನು ಅಮಾನತು ಮಾಡಬೇಕು. ಮಧುಗಿರಿ ತಾಲ್ಲೂಕು ಬ್ಯಾಲ್ಯಾ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟ ಪಿಡಿಒ ಗಳಿದ್ದಾರೆ ಮತ್ತು ಭ್ರಷ್ಟ ಬಿಲ್ ಕಲೆಕ್ಟರ್ ಇವರನ್ನು ಅಮಾನತು ಮಾಡಬೇಕು ಅಲ್ಲಿವರೆಗೂ ನಮ್ಮ ಯಾವುದೇ ಪ್ರತಿಭಟನೆ ಕೈಬಿಡುವುದಿಲ್ಲ ಎಂದರು

    ನೊಂದ ಮಹಿಳೆ ಉಮಾದೇವಿ ಮಾತನಾಡಿ, ಮೂರ್ನಾಲ್ಕು ವರ್ಷದಿಂದಲೂ ಧರಣಿ ಕುಳಿತು ಕೊಳ್ಳುತ್ತಿದ್ದೇವೆ ಧರಣಿ ಕೂತ ನಂತರ ಹಕ್ಕುಪತ್ರ ಕೊಡುತ್ತೇವೆ ಎಂದು ಹೇಳಿದರು. ಆದರೆ ಕೊಡಲಿಲ್ಲ, ನಾವು ಚಿಕ್ಕ ಮಕ್ಕಳನ್ನು ಮತ್ತು ಓದುವ ಮಕ್ಕಳನ್ನು ಇಟ್ಟುಕೊಂಡು ಮಳೆಯಲ್ಲಿ ಚಳಿಯಲ್ಲಿ ಬೇಸಿಗೆಯಲ್ಲಿ ಧರಣಿ ನಡೆಸುತ್ತಿದ್ದೇವೆ ಆದರೆ ಇದುವರೆಗೂ ಹಕ್ಕುಪತ್ರ ಕೊಡುತ್ತಿಲ್ಲ ಎಂದು ನೋವು ತೋಡಿಕೊಂಡರು.


    Provided by
    Provided by

    ವರದಿ: ಎ.ಎನ್.ಪೀರ್ ,  ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.