ಬಿಹಾರದಲ್ಲಿ 24 ಗಂಟೆಗಳಲ್ಲಿ ಸಿಡಿಲು ಬಡಿದು 19 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಏಳು ಮಂದಿ ಗಾಯಗೊಂಡಿದ್ದಾರೆ.
ಸಿಡಿಲು ಬಡಿದು ಸಾವಿಗೀಡಾದವರಲ್ಲಿ ಹೆಚ್ಚಿನವರು ಹೊಲಗಳಲ್ಲಿ ಕೆಲಸ ಮಾಡುತ್ತಿದ್ದವರು. ರಾಜ್ಯದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಆರು ಜಿಲ್ಲೆಗಳಾದ ಜೆಹಾನಾಬಾದ್, ಮಾಧೇಪುರ, ಪೂರ್ವ ಚಂಪಾರಣ್, ರೋಹ್ತಾಸ್, ಸರನ್ ಮತ್ತು ಸುಪೌಲ್ ನಲ್ಲಿ 19 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA