ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಹಾಗೂ 195ನೇ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಹುತಾತ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮುಖೇನ ಗೌರವ ಸಮರ್ಪಿಸಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಶುಭಕಲ್ಯಾಣ್, ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು, ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಮೋಹನ್ ಕುಮಾರ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ರಾಜಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೇಲ್ವಿಚಾರಕರಾದ ಡಿ.ವಿ. ಸುರೇಶ್ಕುಮಾರ್, ಕುರುಬ ಸಮುದಾಯದ ಮುಖಂಡರಾದ ಕೆಂಪರಾಜು, ಅನಿಲ್ ಮೊದಲಾದವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4