ಹವಾಮಾನ ವೈಪರೀತ್ಯದಿಂದಾಗಿ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಗಾಂನ ನುನ್ವಾನ್ ಶಿಬಿರದಿಂದ ಪವಿತ್ರ ಗುಹೆಯತ್ತ ತೆರಳಲು ಯಾತ್ರಾರ್ಥಿಗಳಿಗೆ ಅನುಮತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತಾನಾಗ್ ಜಿಲ್ಲೆಯ ಪಹಲ್ಗಾಂನ ಮೂಲ ಶಿಬಿರವನ್ನು ಕಳೆದ ಗುರುವಾರ ಅಮರನಾಥ ಯಾತ್ರಿಗಳ ಮೊದಲ ತಂಡ ತಲುಪಿತ್ತು. ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆಗೆ ಈ ಬಾರಿ ಚಾಲನೆ ನೀಡಿತ್ತು.
ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಿವಿಕವಾಗಿ ರೂಪಗೊಂಡ ಮಂಜುಗಡ್ಡೆ ಲಿಂಗವನ್ನು ಹೊಂದಿರುವ ಗುಹೆಯಲ್ಲಿರುವ ದೇಗುಲ ಜಗತ್‌ಪ್ರಸಿದ್ಧವಾಗಿದೆ. ಶಿವಲಿಂಗನ ದರ್ಶನ ಪಡೆದು ಬಹುತೇಕ ಯಾತ್ರಿಕರು ಕಾಲ್ನಡಿಗೆಯಲ್ಲಿ ತೆರಳುತ್ತಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗರ್ವನರ್ ಜಮ್ಮು ಬೇಸ್ ಕ್ಯಾಂಪ್‌ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‌ಗೆ ಚಾಲನೆ ನೀಡಿದರು. ಅಮರನಾಥ ದೇಗುಲ ಮಂಡಳಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಆನ್ ಲೈನ್ ದರ್ಶನ ಅವಕಾಶ ಕಲ್ಪಿಸಿದೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy