ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಬರೋಬ್ಬರಿ 2.10 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ.
ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಸಲ್ಲಿಸಿದವರ ಶೈಕ್ಷಣಿಕ ಅರ್ಹತೆಯ ವಿವರಗಳನ್ನು ಬಿಡುಗಡೆ ಮಾಡಿದೆ.
ಬಿಎ ಪದವಿ ಪಡೆದ 63,769 ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, 38,692 ಇಂಜಿನಿಯರಿಂಗ್ ಪದವೀಧರರು, 36,091 ಬಿಎಸ್ಸಿ, 34,795 ಬಿಕಾಂ, 6156 ಬಿಟೆಕ್, 3306 ಬಿಸಿಎ, 803 ಎಂಬಿಬಿಎಸ್ ಪದವೀಧರರು ಕೆಎಎಸ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.
ನೇರ ಪದವಿ, ನೇರ ಸ್ನಾತಕೋತ್ತರ ಪದವಿ ಸೇರಿ ಒಟ್ಟು 144 ಪ್ರಕಾರ ಪದವಿ ಓದಿದವರು ಕೆಎಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


